Site icon ಉಡುಪಿ ನ್ಯೂಸ್ ಪ್ಲಸ್

13 ಕೋಟಿ 74 ಲಕ್ಷ ರೂಪಾಯಿ ವೆಚ್ಚದ ಪುತ್ತಿಗೆ ಸೇತುವೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟನೆ

ಉಡುಪಿ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169A ಯ ಪುತ್ತಿಗೆಯ ಸೇತುವೆ ನಿರ್ಮಾಣಕ್ಕೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಅಹಾರ ಸಂಸ್ಕರಣ ಉದ್ಯಮ ಇಲಾಖೆಯ ಸಚಿವರಾದ ಶೋಭಾ ಕರಂದ್ಲಾಜೆ ಅವರ ಶಿಫಾರಸ್ಸಿನ ಮೇರೆಗೆ 13 ಕೋಟಿ 74 ಲಕ್ಷ ರೂಪಾಯಿ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಇಂದು ದಿನಾಂಕ 13-03-2024 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತಿ, ಉಪಾಧ್ಯಕ್ಷರಾದ ಹರೀಶ್ ಸಾಲಿಯಾನ್, ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚೇತನಾ, ಕೊಡಿಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂದೀಪ್, ಉಪಾಧ್ಯಕ್ಷರಾದ ಇಂದಿರಾ ಕೆ, ಹಿರಿಯಡಕ ಗ್ರಾಮ ಪಂಚಾಯತ್ ಸದಸ್ಯರಾದ ನಾರಾಯಣ ಹಾಗೂ ಪೆರ್ಡೂರು, ಕೊಡಿಬೆಟ್ಟು, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Exit mobile version