ಕುಕ್ಕೆಹಳ್ಳಿ ಶಕ್ತಿ ಕೇಂದ್ರದ ಸಭೆ 24-03-2024 ರಂದು ಹರಿಜೀವನ್ ಹೆಗ್ಡೆ ಅವರ ಮನೆಯಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿದರು. ಶಾಸಕರು ಮಾತನಾಡಿ ಶ್ರೀ ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗುವ ಮೊದಲು ಭಾರತದ ಆರ್ಥಿಕತೆ 14ನೇ ಸ್ಥಾನದಲ್ಲಿತ್ತು. ನರೇಂದ್ರ ಮೋದಿ ಅವರು ಪ್ರಧಾನಿಯಾದ ಎರಡೆ ಅವಧಿಗೆ ಭಾರತದ ಆರ್ಥಿಕತೆ ಐದನೇ ಸ್ಥಾನಕ್ಕೆ ಬಂದಿದೆ. ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾದರೆ ವಿಶ್ವದಲ್ಲಿ ಭಾರತದ ಆರ್ಥಿಕತೆ ದ್ವಿತೀಯ ಸ್ಥಾನಕ್ಕೆ ಏರುವುದರಲ್ಲಿ ಸಂಶಯವಿಲ್ಲ ಹಾಗಾಗಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಮನದಟ್ಟು ಮಾಡಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಗೆಲ್ಲಿಸಲು ನಾವೆಲ್ಲರೂ ಶ್ರಮಿಸಬೇಕು ಎಂದರು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿ, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಮರುಳಿಧರ್ ಪೈ, ಪೆರ್ಡೂರು ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಸಾಲಿಯಾನ್, ಕುಕ್ಕೆಹಳ್ಳಿ ಶಕ್ತಿ ಕೇಂದ್ರದ ಸಂಚಾಲಕರಾದ ಪುರಂದರ್ ಕೋಟ್ಯಾನ್, ಕುಕ್ಕೆಹಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಕ್ಕೆಹಳ್ಳಿ ಶಕ್ತಿ ಕೇಂದ್ರ ಸಭೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

