Site icon ಉಡುಪಿ ನ್ಯೂಸ್ ಪ್ಲಸ್

ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಗಳು ಆಗಬೇಕಾಗಿರುವುದನ್ನು ಗಮನಿಸಿದ್ದೇನೆ : ಮಾಜಿ ಶಾಸಕ ರಘುಪತಿ ಭಟ್

ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಮಹತ್ತರವಾದ ಬದಲಾವಣೆಗಳು ಆಗಬೇಕಾಗಿರುವುದನ್ನು ಗಮನಿಸಿದ್ದೇನೆ. ನೈಋತ್ಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಇರುವ ನಿಯಮದಿಂದಾಗಿ ಲಕ್ಷಾಂತರ ಮಂದಿ ಪದವೀಧರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ವಿಶ್ವವಿದ್ಯಾಲಯಗಳ ಮಟ್ಟದಲ್ಲಿಯೇ ಮತದಾರರ ಪಟ್ಟಿಯಲ್ಲಿ ಹೆಸರು ದಾಖಲಿಸುವ ಹೊಸ ನಿಯಮ ಜಾರಿಗೆ ಪ್ರಯತ್ನಿಸುತ್ತೇನೆ.

Exit mobile version