ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷರು, ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಶ್ರೀಮತಿ ಡಾ. ಆರತಿ ಕೃಷ್ಣ ಅವರು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಆಶೀರ್ವಾದ ಪಡೆದು ಶ್ರೀಕೃಷ್ಣನ ಅನ್ನ ಪ್ರಸಾದ ಸ್ವೀಕರಿಸಿದರು. ಗೀತಾ ಮಂದಿರದಲ್ಲಿ ಪುತ್ತಿಗೆ ಮಠದ ಪರ್ಯಾಯ ಸ್ವಾಮಿಗಳಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರಿಂದ ಪ್ರಸಾದ ಸ್ವೀಕರಿಸಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಕಾಂಗ್ರೆಸ್ ಮುಖಂಡರಾದ ಗಣೇಶ್ ನೆರ್ಗಿ, ಶರತ್ ಶೆಟ್ಟಿ, ವಿಶ್ವಾಸ್ ಅಮೀನ್, ಸೌರಭ್ ಬಲ್ಲಾಳ್, ಸತೀಶ್ ಕುಮಾರ್ ಮಂಚಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.
