Site icon ಉಡುಪಿ ನ್ಯೂಸ್ ಪ್ಲಸ್

ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಶಾಕ್; ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್‌ಗಳ ಅಕ್ರಮ ವರ್ಗಾವಣೆ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರು ಆದೇಶ ನೀಡಿದ್ದರು. ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸಿಎಂ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಎ ಮಾಡುವಂತೆ ಗ್ರೀನ್ ಸಿಗ್ನಲ್ ನೀಡಿದೆ. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MUDA) 14 ಸೈಟುಗಳನ್ನು ತಮ್ಮ ಪತ್ನಿ ಹೆಸರಿಗೆ ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಖಾಸಗಿ ವ್ಯಕ್ತಿಗಳು ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯಪಾಲರಾದ ಥಾವರ ಚಂದ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಾರೆ. ಆದರೆ, ಪ್ರಾಸಿಕ್ಯೂಷನ್ ಎದುರಿಸದೇ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ಗೆ ಮೇಲ್ಮನವಿ ಹೋಗಿದ್ದರು. ಈ ಅರ್ಜಿ ವಿಚಾರಣೆ ಮಾಡಿದ್ದ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಸೆ.24ರಂದು ಆದೇಶ ನೀಡುವುದಾಗಿ ತಿಳಿಸಿದ್ದರು ಸಿಎಂ ಸಿದ್ದರಾಮಯ್ಯ ಅವರು ಪ್ರಾಸಿಕ್ಯೂಷನ್‌ಗೆ ಹಾಜರಾಗುವಂತೆ ರಾಜ್ಯಪಾಲರು ನೋಟೀಸ್ ನೀಡದ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮುಡಾ ಹಗರಣದ ಅರ್ಜಿ ವಿಚಾರಣೆಯನ್ನೂ ಕೈಗೆತ್ತಿಕೊಂಡಿತ್ತು. ಆದರೆ, ಹೈಕೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಪಿಟಿಷನ್ ಅರ್ಜಿಯ ಆದೇಶ ಹೊರಬೀಳುವವರೆಗೂ ಕೆಳ ಹಂತದ ಯಾವುದೇ ನ್ಯಾಯಾಲಯಗಳು (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಯಾವುದೇ ತೀರ್ಪು ಅಥವಾ ಆದೇಶ ನೀಡದಂತೆ ಹೈಕೋರ್ಟ್‌ನಿಂದ ತಡೆ ಒಡ್ಡಲಾಗಿತ್ತು. ಇದೀಗ ಆದೇಶ ಹೊರ ಬಿದ್ದ ಬೆನ್ನಲ್ಲಿಯೇ ಕೆಳ ಹಂತದ ಕೋರ್ಟ್‌ಗಳಲ್ಲಿ ಪ್ರಾಸಿಕ್ಯೂಷನ್ ವಿಚಾರಣೆ ನಡೆಯಲಿದೆ. ಇದೀಗ ಸಿಎಂ ಹೈಕೋರ್ಟ್‌ಗೆ ಸಲ್ಲಿಕೆ ಮಾಡಿದ್ದ ಅರ್ಜಿ ವಜಾಗೊಳಿಸಿದ ಬೆನ್ನಲ್ಲಿಯೇ ಮುಡಾ ಹಗರಣದ ತನಿಖೆ ಮುಂದುವರಿಯಲಿದೆ

Exit mobile version