Site icon ಉಡುಪಿ ನ್ಯೂಸ್ ಪ್ಲಸ್

ಪರಿಷತ್‌ ಉಪಚುನಾವಣೆ: ರಾಜು ಪೂಜಾರಿ ಕಾಂಗ್ರೆಸ್‌ ಅಭ್ಯರ್ಥಿ

ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ರಾಜು ಪೂಜಾರಿ ಬೈಂದೂರು ಅವರಿಗೆ ಟಿಕೆಟ್ ನೀಡಿ ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಅಧಿಕೃತ ಘೋಷಣೆ ಮಾಡಿದ್ದಾರೆ. ಈಗಾಗಲೇ ಬಿಜೆಪಿ ಸಹ ತನ್ನ ಅಭ್ಯರ್ಥಿಯನ್ನು ಕಿಶೋರ್ ಕುಮಾರ್ ಪುತ್ತೂರ್​ಗೆ ಟಿಕೆಟ್ ನೀಡಲಾಗಿದ್ದು, ಇದೇ ಅಕ್ಟೋಬರ್ 21ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳನ್ನು ಪ್ರತಿನಿಧಿಸುವ ವಿಧಾನ ಪರಿಷತ್‌ ಸ್ಥಾನದ ಮರು ಚುನಾವಣೆ ನಡೆಯಲಿದೆ

Exit mobile version