Site icon ಉಡುಪಿ ನ್ಯೂಸ್ ಪ್ಲಸ್

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನ.13ಕ್ಕೆ ಉಪ ಚುನಾವಣೆ, 23ಕ್ಕೆ ಫಲಿತಾಂಶ ಘೋಷಣೆ!

. ನವದೆಹಲಿ(ಅ.15) ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ. ಇನ್ನು ನವೆಂಬರ್ 23 ರಂದು ಮತಎಣಿಕೆ ನಡದು ಫಲಿತಾಂಶ ಘೋಷಣೆಯಾಗಲಿದೆ. ಕರ್ನಾಟಕ ಉಪ ಚುನಾವಣೆ ಕುರಿತು ಗಜೆಟ್ ನೋಟಿಫಿಕೇಶನ್ ಅಕ್ಟೋಬರ್ 18ರಂದು ಹೊರಡಿಸಲಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ಪರಿಶೀಲನೆ ಅಕ್ಟೋಬರ್ 28ಕ್ಕೆ ನಡೆಯಲಿದೆ.ನಾಮಪತ್ರ ಹಿಂತೆಗೆದುಕೊಳ್ಳಲು ಅಕ್ಟೋಬರ್ 30 ಕೊನೆಯ ದಿನವಾಗಿದೆ.

Exit mobile version