ಉಡುಪಿ ನ್ಯೂಸ್ ಪ್ಲಸ್

ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ ಬಿಡುಗಡೆ..!!

ನವದೆಹಲಿ : ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ 32 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾನೆ.  ಪೆರಾರಿವಾಲನ್ ಮತ್ತು ಅವರ ತಾಯಿಯ ಮನವಿ ಮೇರೆಗೆ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಈ ಆದೇಶ ನೀಡಿದ್ದಾರೆ.ಪೆರಾರಿವಾಲನ್‌ ನನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಆದೇಶ ನೀಡಲಾಗಿದೆ.  ಈ ಹಿಂದೆ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿತ್ತು.  ಜೈಲಿನಲ್ಲಿ ಉತ್ತಮ ನಡತೆಯ ಹೊರತಾಗಿಯೂ ಪೆರಾರಿವಾಲನ್ ಅವರ ವಿರುದ್ಧ ತಾರತಮ್ಯ ಎಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಟೀಕಿಸಿತ್ತು
Exit mobile version