Site icon ಉಡುಪಿ ನ್ಯೂಸ್ ಪ್ಲಸ್

ಉದ್ಯಾವರ: ನಿಂತಿದ್ದ ಲಾರಿಗೆ ಟೂರಿಸ್ಟ್ ವಾಹನ ಢಿಕ್ಕಿ; ಟೂರಿಸ್ಟ್ ವಾಹನ ನಜ್ಜು ಗುಜ್ಜು ಹಲವು ಪ್ರವಾಸಿಗರಿಗೆ ಗಾಯ

ಉದ್ಯಾವರ: ಲಾರಿಗೆ ಟೂರಿಸ್ಟ್ ವಾಹನ ಢಿಕ್ಕಿ ಹೊಡೆದು ಕೊಲ್ಲೂರಿಗೆ ತೆರಳುತ್ತಿದ್ದ ಪ್ರವಾಸಿಗರಿಗೆ ಗಾಯಗೊಂಡ ದುರ್ಘಟನೆ ನ.3ರ ರವಿವಾರ ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಪೆಟ್ರೋಲ್ ಬಂಕ್ ಬಳಿ ನಡೆದಿದೆ.ಕೊಲ್ಲೂರಿನತ್ತ ತೆರಳುತ್ತಿದ್ದ ಅನ್ಯ ರಾಜ್ಯದ ಟೂರಿಸ್ಟ್ ವಾಹನವು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಮಹಿಳೆಯರೂ ಸೇರಿದಂತೆ ಪ್ರವಾಸಿಗರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಟೂರಿಸ್ಟ್ ವಾಹನ ನಜ್ಜು ಗುಜ್ಜು ಗೊಂಡಿದೆ ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ

Exit mobile version