Site icon ಉಡುಪಿ ನ್ಯೂಸ್ ಪ್ಲಸ್

ಕಾಪು ದಂಡತೀರ್ಥ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಸಮಾರಂಭ

ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದಿನಾಂಕ ೦7-12-2024 ರಂದು ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಸಮಾರಂಭವು ನಡೆಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕಾಪುವಿನ ಮಾಜಿ ಶಾಸಕರಾದ ಲಾಲಾಜಿ ಆರ್. ಮೆಂಡನ್ ಇವರು ಮಾತನಾಡಿ, ದಿವಂಗತ ಡಾ|| ಕೆ. ಪ್ರಭಾಕರ ಶೆಟ್ಟಿಯವರ ದೂರದರ್ಶಿತ್ವದಿಂದಾಗಿ ಈ ಕಾಲೇಜು ಪ್ರಾರಂಭವಾಯಿತು. ಪ್ರಸ್ತುತ ಹಲವಾರು ಮಂದಿಗೆ ತಮ್ಮ ಜೀವನದ ಬೆಳಕು ನೀಡಿದೆ. ಇಂತಹ ಅಪೂರ್ವ ಸಾಧನೆಯನ್ನು ಮಾಡಿದ ಈ ವಿದ್ಯಾಸಂಸ್ಥೆಯು ಇನ್ನಷ್ಟು ಪ್ರಗತಿಯನ್ನು ಕಾಣುವಂತಾಗಲಿ ಎಂದು ಶುಭ ಹಾರೈಸಿದರು. ಇನ್ನೋರ್ವ ಮುಖ್ಯ ಅತಿಥಿಯಾದ ದoಡತೀರ್ಥ ಪ್ರತಿಷ್ಠಾನದ ಅಧ್ಯಕ್ಷರಾದ ಡಾ|| ಸೀತಾರಾಮ ಭಟ್, ಶಾಲೆಯ ಸಂಸ್ಥಾಪಕರು ನನ್ನ ಸನ್ಮಿತ್ರ, ಶಿಕ್ಷಣದ ಬಗ್ಗೆ ಅತೀವ ಕಾಳಜಿ ವಹಿಸಿದವರು, ಇಂದು ಅವರು ಬೆಳೆಸಿದ ವಿದ್ಯಾಸಂಸ್ಥೆ ಹೆಮ್ಮರವಾಗಿದೆ. ವಿದ್ಯಾರ್ಥಿಗಳಾದ ತಾವು ಶಿಸ್ತು ಸಹಿತ ಶಿಕ್ಷಣವನ್ನು ಪಡೆದು ದೇಶಭಕ್ತಿ ಭಾವನೆಯನ್ನು ಬೆಳೆಸುವವರಾಗಿ ಎಂಬ ಸಂದೇಶ ನೀಡಿದರು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಸಂಚಾಲಕರಾದ ಡಾ|| ಕೆ. ಪ್ರಶಾಂತ್ ಶೆಟ್ಟಿಯವರು ವಿದ್ಯಾರ್ಥಿಗಳು, ಶಿಕ್ಷಕ ವೃಂದ ಹಾಗೂ ಹೆತ್ತವರು ಸಮಾರಂಭದ ಯಶಸ್ಸಿಗೆ ದುಡಿದಿದ್ದಾರೆ. ಪದವಿ ಪೂರ್ವ ಕಾಲೇಜಿನ ರಜತಾಚರಣೆಗೆ ಇದೇ ರೀತಿಯ ಸಹಕಾರವನ್ನು ನೀಡಿ, ವಿದ್ಯಾಸಂಸ್ಥೆಯ ಪ್ರಗತಿಗೆ ನಿಮ್ಮೆಲ್ಲರ ಸಹಕಾರ ಅತ್ಯಗತ್ಯ ಎಂಬ ಮಾತನಾಡಿದರು. ಸಮಾರಂಭದಲ್ಲಿ ಪಾಲ್ಗೊಂಡ ಕಾಪು ಪುರಸಭೆಯ ಅಧ್ಯಕ್ಷೆ ಹರಿಣಾಕ್ಷಿ ದೇವಾಡಿಗ ಇವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ವಿದ್ಯಾಸಂಸ್ಥೆಯ ಟ್ರಸ್ಟ್ ನ ಅಧ್ಯಕ್ಷೆ ಶೋಭಾ ಪಿ. ಶೆಟ್ಟಿ, ಪ್ರಶಾಂತ್ ಪ್ಯಾರಾಮೆಡಿಕಲ್ ಕಾಲೇಜಿನ ನಿರ್ದೇಶಕರಾದ ಡಾ|| ಪನ್ನಾ ಪಿ. ಶೆಟ್ಟಿ, ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್, ಪ್ರಾಂಶುಪಾಲ ನೀಲಾನಂದ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಪ್ರಾಥಮಿಕ ವಿಭಾಗದ ಮುಖ್ಯಸ್ಥರುಗಳಾದ ಗೇಬ್ರಿಯಲ್ ಮಸ್ಕರೇನ್ಹಸ್, ಕೃಪಾ ಅಮ್ಮನ್ನ, ರಾಜಲಕ್ಷ್ಮಿ ಜಿ. ರಾವ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸಮೃದ್ಧಿ ಸ್ವಾಗತಿಸಿ, ಶ್ರವಣ್ ಕುಮಾರ್ ವಂದಿಸಿದ ಈ ಕಾರ್ಯಕ್ರಮವನ್ನು ಸಾನ್ವಿ ಆರ್. ಶೆಟ್ಟಿ, ಶಿಫಾನ ಐ., ಮೊಹಮ್ಮದ್ ಅದಾನ್ ಮತ್ತು ಪ್ರಜ್ಞಾ ನಿರೂಪಿಸಿದರು.

Exit mobile version