Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನ ದಿನಾಚರಣೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿಯಲ್ಲಿ ರಾಜ್ಯ ಸಂಸ್ಥೆಯ ಸೂಚನೆಯಂತೆ ಗುರುವಾರದಂಡು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವಜ್ರ ಮಹೋತ್ಸವದ ಪ್ರಾರಂಭದ ಅಂಗವಾಗಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನ ದಿನಾಚರಣೆಯನ್ನು ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಆಚರಿಸಲಾಯಿತು ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಸಮ್ಮುಖದಲ್ಲಿ ಜಿಲ್ಲಾ ಮುಖ್ಯ ಆಯುಕ್ತ ಇಂದ್ರಾಳಿ ಜಯಕರ್ ಶೆಟ್ಟಿ, ಜಿಲ್ಲಾ ಸ್ಕೌಟ್ ಆಯುಕ್ತ ಜನಾರ್ದನ್ ಕೊಡವೂರು, ಜಿಲ್ಲಾ ಕಾರ್ಯದರ್ಶಿ ಆನಂದ್ ಅಡಿಗ, ಜಿಲ್ಲಾ ಖಜಾಂಚಿ ಹರಿ ಪ್ರಸಾದ್ ರೈ, ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶೇಖರ್ ಪೂಜಾರಿ, ದಳ ನಾಯಕಿಯರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ್ ಶೇಖರ್ ಬನ್ನಿ ಕಬ್, ಬುಲ್ ಬುಲ್ ಸ್ಕೌಟ್ಸ್, ಗೈಡ್ಸ್ , ರೋವರ್, ರೇಂಜರ್ಸ್, ಇವರೆಲ್ಲರ ಸಮ್ಮುಖದಲ್ಲಿ ಧ್ವಜ ಚೀಟಿಯನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾಧಿಕಾರಿಯವರು ಸ್ಕೌಟ್ಸ್ ಗೈಡ್ಸ್ ನಿಧಿಗೆ ದೇಣಿಗೆ ನೀಡುವುದರ ಮೂಲಕ ಉದ್ಘಾಟಿಸಿದರು. ಜಿಲ್ಲಾ ಪದಾಧಿಕಾರಿ ಯವರೆಲ್ಲರೂ ಅವರೊಂದಿಗೆ ಕೈಜೋಡಿಸಿದರು. ಹಾಗೂ ಇತರ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ದೇಣಿಗೆಯನ್ನು ಸಂಗ್ರಹಿಸಲಾಯಿತು

Exit mobile version