Site icon ಉಡುಪಿ ನ್ಯೂಸ್ ಪ್ಲಸ್

ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ

ಉಡುಪಿ ತಾಲೂಕು ಮಟ್ಟದ ತ್ರೈಮಾಸಿಕ ಕೆ.ಡಿ.ಪಿ ಸಭೆ ಇಂದು ದಿನಾಂಕ 12-11-2024 ರಂದು ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಮಾತನಾಡಿ ಉಡುಪಿ ತಾಲೂಕಿನ ಕಾಪು ಕ್ಷೇತ್ರದ 10 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ 94 ಸಿ. ಹಾಗೂ 94 ಸಿ.ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಕಡತಗಳನ್ನು ಶೀಘ್ರವೇ ವಿಲೆಗೊಳಿಸುವಂತೆ ತಿಳಿಸಿ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ತುರ್ತು ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖಾಧಿಕಾರಿಗಳಿಗೆ ಸೂಚಿಸಿ ಸಣ್ಣ ನೀರಾವರಿ ವ್ಯಾಪ್ತಿಗೆ ಬರುವ ಕಿಂಡಿ ಅಣೆಕಟ್ಟುಗಳಲ್ಲಿ ನೀರಿನ ಶೇಖರಣೆಯನ್ನು ಸಮರ್ಪಕವಾಗಿ ನಿರ್ವಹಿಸಿ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ ಕುಡಿಯುವ ನೀರು ಹಾಗೂ ಕೃಷಿ ಕಾರ್ಯಗಳಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿ ಅನರ್ಹ ಬಿಪಿಎಲ್ ಕಾರ್ಡ್ ಎಂದು ಗುರುತಿಸಿರುವ ಪಡಿತರ ಚೀಟಿಗಳ ಫಲಾನುಭವಿಗಳ ದಾಖಲೆಗಳ ನೈಜತೆ ಪರಿಶೀಲನೆ ಮಾಡಿ ನಂತರವೆ ಅವರ ಬಿಪಿಎಲ್ ಕಾರ್ಡ್ ರದ್ದತಿ ಬಗ್ಗೆ ಕ್ರಮ ಕೈಗೊಳ್ಳಬೇಕು ಅಲ್ಲಿಯ ವರೆಗೆ ಸದ್ರಿ ಫಲಾನುಭವಿಗಳಿಗೆ ಪಡಿತರ ವ್ಯವಸ್ಥೆಯನ್ನು ಮೊದಲಿನಂತೆ ಮುಂದುವರೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಉಡುಪಿ ತಾಲೂಕು ಪಂಚಾಯತ್ ಆಡಳಿತಾಧಿಕಾರಿಗಳಾದ ರವೀಂದ್ರ, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ತಹಶೀಲ್ದಾರರಾದ ಗುರುರಾಜ್ ಹಾಗೂ ಉಡುಪಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version