ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನ ನಿರ್ಮಾಣ ಮತ್ತು ಅಭಿವೃದ್ಧಿ ಸಮಿತಿ – ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎಂ.ಆರ್.ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಕುಂತಳನಗರದ ಉಡುಪಿ ಗ್ರಾಮೀಣ ಬಂಟರ ಸಂಘದ ಸಭಾಭವನದಲ್ಲಿ ಇಂದಿನಿಂದ 2 ದಿನಗಳ ಕಾಲ ಆಯೋಜಿಸಿರುವ “ಉದ್ಯೋಗ ಮೇಳ” ಇದರ ಉದ್ಘಾಟನಾ ಸಮಾರಂಭದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಯಶ್ ಪಾಲ್ ಸುವರ್ಣ, ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಜಿಲ್ಲಾಧಿಕಾರಿಗಳಾದ ವಿದ್ಯಾ ಕುಮಾರಿ, ಎಂ.ಆರ್.ಜಿ ಗ್ರೂಪ್ ನ ಆಡಳಿತ ನಿರ್ದೇಶಕರಾದ ಬಂಜಾರ ಪ್ರಕಾಶ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ ಹಾಗೂ ಮನೋಹರ್ ಶೆಟ್ಟಿ, ಯೋಗೀಶ್ ಶೆಟ್ಟಿ ಮತ್ತು ಸುಜ್ಲಾನ್ ಸಂಸ್ಥೆಯ ನಿರ್ದೇಶಕರಾದ ಅಶೋಕ್ ಶೆಟ್ಟಿ ಹಾಗೂ ಉದ್ಯಮಿಗಳು ಉಪಸ್ಥಿತರಿದ್ದರು.
ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2 ದಿನಗಳ ಉದ್ಯೋಗ ಮೇಳ ಉದ್ಘಾಟನಾ ಸಮಾರಂಭ

