ಕಾಪು ವಿಧಾನಸಭಾ ಕ್ಷೇತ್ರದ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಪು – ಪಣಿಯೂರು ಮುಖ್ಯ ರಸ್ತೆ ಅಭಿವೃದ್ಧಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶಿಫಾರಸ್ಸಿನ ಮೇರೆಗೆ ಲೋಕೋಪಯೋಗಿ ಇಲಾಖೆಯಿಂದ 50 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಇಂದು ದಿನಾಂಕ 15-03-2025 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಉಪಾಧ್ಯಕ್ಷರಾದ ಶೋಭಾ ಭಟ್, ಉಚ್ಚಿಲ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಚಂದ್ರಶೇಖರ್, ಬೆಳಪು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರವೀಣ್ ಡಿಸೋಜಾ, ಬೆಳಪು ಗ್ರಾಮ ಪಂಚಾಯತ್ ಸದಸ್ಯರು, ಗುತ್ತಿಗೆದಾರು, ಸ್ಥಳೀಯರು ಉಪಸ್ಥಿತರಿದ್ದರು.

