ಕಾಪು : ಕಾಪು ತಾಲೂಕಿನ ಮೂಳೂರು ಮತ್ತು ತೊಟ್ಟಂ ಪರಿಸರದ ತೀವ್ರ ಕಡಲೊರೆತದ ಪ್ರದೇಶಗಳಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ನೇತೃತ್ವದಲ್ಲಿ ಕಾಂಗ್ರೆಸ್ ನಿಯೋಗವು ಸ್ಥಳಕ್ಕೆ ಭೇಟಿ ನೀಡಿ ಹಾನಿ ಪರಿಶೀಲನೆ ನಡೆಸಿತು. ರಾಜ್ಯದ ಕರಾವಳಿ ಜಿಲ್ಲೆಯ ಪ್ರಮುಖ ಪ್ರದೇಶಗಳು ಸೇರಿದಂತೆ ಸಾಕಷ್ಟು ಭಾಗಗಳು ವರ್ಷದಿಂದ ವರ್ಷಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕಡಲಿನ ಒಡಲಿಗೆ ಸೇರುತ್ತಿದ್ದು, ಸಮುದ್ರ ತೀರದಲ್ಲಿ ನೆಲೆಸಿರುವ ಮೀನುಗಾರರಲ್ಲಂತೂ ಭೀತಿಯ ವಾತಾವರಣ ಸೃಷ್ಠಿಯಾಗಿದೆ. ಇದರಿಂದ ಆತಂಕಿತರಾಗಿರುವ ಕಡಲಜೀವಶಾಸ್ತ್ರಜ್ಞರು, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಬೀಚ್‌ಗಳು ಮಾತ್ರವಲ್ಲದೇ, ಹಲವು ಗ್ರಾಮಗಳು ಕೂಡಾ ಸಮುದ್ರ ಪಾಲಾಗುವ ಸಾಧ್ಯತೆ ಇದೆ

ಸ್ಥಳೀಯರ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಕಡಲ್ಕೂರೆತ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂಪೂರ್ಣ ವಿಫಲವಾಗಿವೆ. ಜನರ ಬದುಕನ್ನು ದುಸ್ತರಗೊಳಿಸುತ್ತಿರುವ ಎರಡೂ ವಿಚಾರಗಳಲ್ಲಿ ಸರಕಾರಗಳು ಪಕ್ಷ ರಾಜಕೀಯ ಮಾಡುತ್ತಿದ್ದು ಕಾಂಗ್ರೆಸ್ ಬೆಂಬಲಿತ ಪ್ರದೇಶಗಳಲ್ಲಿ ಸಮರ್ಪಕ ಕಾಮಗಾರಿ ನಡೆಸದೇ ತಾರತಮ್ಯ ನಡೆಸುತಿವೆ ಕಡಲ್ಕೂರತ ಪ್ರದೇಶಗಳಲ್ಲಿ ತುರ್ತು ತಡಗೋಡ ರಚಿಸಬೇಕಿದೆ ಎಂದರು ಮಾಜಿ ಸಚಿವ ವಿನಯಕುಮಾರ್ ಸೊರಕೆ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಕಾರ್ಯದರ್ಶಿ ಎಂ.ಎ. ಗಫೂರ್, ಕೆಪಿಸಿಸಿ ಕೋ ಆರ್ಡಿನೇಟರ್ ನವೀನ್‌ಚಂದ್ರು ಜೆ. ಶೆಟ್ಟಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ದೇವಾಡಿಗ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್, ಪುರಸಭಾ ಸದಸ್ಯರಾದ ಸತೀಶ್ಚಂದ್ರ ಮೂಳೂರು, ರಾಧಿಕಾ ಸುವರ್ಣ, ಕಾವು ತಾ. ಪಂ. ಮಾಜಿ ಉಪಾಧ್ಯಕ್ಷ ಯು.ಸಿ. ಶೇಖಬ್ಬ, ಪುಮುಖರಾದ ಅಬ್ದುಲ್ ಹಮೀದ್, ಕೆ.ಎಚ್. ಉಸ್ಮಾನ್, ಕಾಪು ಬ್ಲಾಕ್ ಪ್ರದಾನ ಕಾರ್ಯದರ್ಶಿ ಅಮೀರ್ ದೇಜಡಿ ಉಚ್ಚಿಲ ಸುಲೋಚನಾ ಬಂಗೇರ, ಮಹಾಲಿಂಗ ಆಂಚನ್, ಚಂದ್ರಪ್ಪ ಕೋಟ್ಯಾನ್, ಮಾಜಿ ಪುರಸಭಾ ಸದಸ್ಯರು, ಕಾಂಗ್ರೆಸ್ ಪದಾಕಾರಿಗಳು ಉಪಸ್ಥಿತರಿದ್ದರು.

