ಕಾಂಗ್ರೆಸ್ ಸರಕಾರದ ವಿರುದ್ಧ ಹಾಗೂ ಗ್ಯಾರಂಟಿ ಯೋಜನೆಗೆ ವಿರೋಧ ಮಾಡುವ ಬಿಜೆಪಿ ಪಕ್ಷದ ವಿರುದ್ಧ ಪ್ರತಿಭಟನೆಯನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಮಜೂರ್ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ನಾಗಬೂಷನ್ ರಾವ್ ಅವರ ಸಂಯೋಜನೆಯಲ್ಲಿ ಮಜೂರ್ ಗ್ರಾಮ ಪಂಚಾಯತ್ ಕಚೇರಿ ಮುಂಭಾಗ ಪ್ರತಿಭಟನಾ ಸಭೆ ನಡೆಯಿತು. . ಸಂಧ್ಯಾ ಸುರಕ್ಷಾ, ವಿಧವಾ ವೇತನ ಮೊದಲಾದ ಸಾಮಾಜಿಕ ಪಿಂಚಣಿ ಗಳ ಮರು ಸಮೀಕ್ಷೆ ಕಾರ್ಯ ಸರಕಾರದ ಮಟ್ಟದಲ್ಲಿ ಗ್ರಾಮ ಆಡಳಿತಾಧಿಕಾರಿಗಳ ಮೂಲಕ ನಡೆಯುತ್ತಿದೆ. ಆದರೆ ಬಿಜೆಪಿಗರು ಈ ಪಟ್ಟಿಯನ್ನು ಕೈಯಲ್ಲಿ ಹಿಡಿದು ಪಟ್ಟಿಯಲ್ಲಿರುವ ಪಿಂಚಣಿಗೆ ರದ್ದು ಆಗಲಿದೆ ಎಂದು ಜನರಿಗೆ ಸುಳ್ಳು ಮಾಹಿತಿ ನೀಡುತ್ತಾರೆ. ಖಂಡಿತ ರದ್ದಾಗುವುದಿಲ್ಲ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಾ ಇದೆ. ಯಾರು ಭಯಪಡುವ ಅಗತ್ಯವಿಲ್ಲ ಎಂದು ವಿನಯ್ ಕುಮಾರ್ ಸೊರಕೆ ತಿಳಿಸಿದರು. ಈ ಸಂದರ್ಭದಲ್ಲಿ ವೈ. ಸುಕುಮಾರ್ ಅಧ್ಯಕ್ಷರು – ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ.) ಉಡುಪಿ ಜಿಲ್ಲಾ ಅವ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ನಿಯಾಝ್ ಭಾಸ್ಕರ್ ಕುಮಾರ್ ವಿಜಯ್ ಧೀರಜ್ ಜ್ಯೋತಿ ಸುಲಕ್ಷಣ ಫಾರೂಕ್ ಚಂದ್ರ ನಗರ್ ರಝಕ್ತ್ ಕಾಂಗ್ರೆಸ್ ಸದಸ್ಯರುಗಳು ಉಪಸ್ಥಿತರಿದ್ದರು.

