
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ.ಇಂದು ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ಮೇಯರ್ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು.

