×
Our website is made possible by displaying online advertisements to our visitors. Please consider supporting us by whitelisting our website.
  • 9880645340

ದಂಡತೀರ್ಥ: ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ

ಮಾನವೀಯ ಮೌಲ್ಯಗಳು ವ್ಯಕ್ತಿ ಮತ್ತು ಸಮಾಜದ ಅಭಿವೃದ್ಧಿಗೆ ಅತಿ ಮುಖ್ಯ. ಮೌಲ್ಯಾಧಾರಿತ ಶಿಕ್ಷಣವು ಕೇವಲ ಜ್ಞಾನ ಮಾತ್ರವಲ್ಲದೆ ಉತ್ತಮ ವ್ಯಕ್ತಿತ್ವ ಮತ್ತು ಸಮಾಜವನ್ನು ರೂಪಿಸುತ್ತದೆ ಎಂದು ಉಡುಪಿ ದಕ್ಷಿಣ ವಲಯದ ಶಿಕ್ಷಣಾಧಿಕಾರಿ ಡಾ. ಯಲ್ಲಮ್ಮ ಹೇಳಿದರು.
ಅವರು ಕಾಪು ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳ ಪ್ರಾಥಮಿಕ ವಿಭಾಗದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಇನ್ನೋರ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪಡುಬಿದ್ರಿ ಸೆಝ್(ಸುಝ್ಲಾನ್)ಸಂಸ್ಥೆಯ ಹಿರಿಯ ಜನರಲ್ ಮ್ಯಾನೇಜರ್ ಮತ್ತು ಹೆಡ್ ಆಗಿರುವ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ ಇಂದಿನ ಕಾಲದಲ್ಲಿ ಶಿಕ್ಷಣ ಪ್ರತಿಯೊಬ್ಬರಿಗೂ ಸಿಗಬೇಕು. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದರೆ ಯಶಸ್ಸು ಸಾಧ್ಯ ಎಂದು ಹೇಳಿ, ವಿದ್ಯಾಸಂಸ್ಥೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಬಿ. ಶುಭ ಹಾರೈಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ದಂಡತೀರ್ಥ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಡಾ. ಕೆ. ಪ್ರಶಾಂತ್ ಶೆಟ್ಟಿ ಮಾತನಾಡಿ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರ ಹೊಮ್ಮಲು ಇಂತಹ ಕಾರ್ಯಕ್ರಮಗಳು ಸೂಕ್ತ ವೇದಿಕೆಯನ್ನು ಕಲ್ಪಿಸಿ ಕೊಡುತ್ತವೆ ಎಂದರು.
ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಎಫ್. ಮಸ್ಕರೇನ್ಹಸ್ ಹಾಗೂ ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯನಿ ಶ್ರೀಮತಿ ಕೃಪಾ ಅಮ್ಮನ್ನ ವಾರ್ಷಿಕ ವರದಿಯನ್ನು ವಾಚಿಸಿದರು.
ದಂಡತೀರ್ಥ ಆಡಳಿತ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಶೋಭಾ ಪಿ. ಶೆಟ್ಟಿ, ಪ್ರಶಾಂತ್ ಪ್ಯಾರಾ ಮೆಡಿಕಲ್ ಕಾಲೇಜಿನ ನಿರ್ದೇಶಕಿ ಡಾ.ಪನ್ನಾ ಪಿ. ಶೆಟ್ಟಿ ದಂಡತೀರ್ಥ ಸಮೂಹ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಆಲ್ಬನ್ ರೋಡ್ರಿಗಸ್, ಪ್ರಾಂಶುಪಾಲ ಎಂ.ನೀಲಾನಂದ ನಾಯಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಕನ್ನಡ ಮಾಧ್ಯಮ ಪ್ರಾಥಮಿಕ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶ್ರೀಮತಿ ಮುಬೀನಾ ಬಾನು, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯನಿ ಶ್ರೀಮತಿ ರಾಜಲಕ್ಷ್ಮಿ ಜಿ. ರಾವ್ ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿ ನಾಯಕಿ ಕುಮಾರಿ ಧೃತಿ ಆರ್. ಸುವರ್ಣ ಸ್ವಾಗತಿಸಿದರು. ಕುಮಾರಿ ಗುಲ್ಝಾರ್ ಪರ್ವೀನ್ ಧನ್ಯವಾದವಿತ್ತರು. ಕುಮಾರಿ ಸಫಾ ಕೌನೆನ್ ಮತ್ತು ಕುಮಾರಿ ಆಯೇಶಾ ಮಿಸ್ಬಾ ಸಭಾ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿಗಳಾದ ಮೊಹಮ್ಮದ್ ರಫಾನ್,ಸ್ಟೀವ್ ಆಸ್ಟನ್ ಕರ್ಕಡ, ಕುಮಾರಿ ನಭಾ ಬಾನು ಮತ್ತು ಸನಾ ಬಾನು ಸಾಂಸ್ಕೃತಿಕ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

Your email address will not be published. Required fields are marked *