ಉಡುಪಿ, ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ರಾಷ್ರೀಯ ಸೇವಾ ಯೋಜನೆ ಮತ್ತು ಮಹಿಳಾ ಸಬಲೀಕರಣ ಘಟಕವು ಜಂಟಿಯಾಗಿ ಫೆ.25 2026 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ.
ಈ ಕಾರ್ಯಕ್ರಮವನ್ನು ಸಂಸ್ಥೆಯ ಸಾಮಾಜಿಕ ಸೇವಾ ಉಪಕ್ರಮದ ಅಂಗವಾಗಿ ಆಯೋಜಿಸಲಾಗಿದ್ದು ಸಾರ್ವಜನಿಕರಲ್ಲಿ ಆರೋಗ್ಯ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವುದು ಮತ್ತು ರೋಗಗಳನ್ನು ಪ್ರಾಥಮಿಕ ಹಂತದಲ್ಲೇ ಪತ್ತೆಹಚ್ಚುವಿಕೆಯ ಮೂಲಕ ಅರಿವು ಮೂಡಿಸುವ ಉದ್ದೇಶವನ್ನು ಹೊಂದಿದೆ.
ಶಿಬಿರದಲ್ಲಿ ಸಾಮಾನ್ಯ ವೈದ್ಯಕೀಯ ತಪಾಸಣೆ, ಹೃದಯ ರೋಗ ತಪಾಸಣೆ ( ಲಭ್ಯತೆಯ ಆಧಾರದ ಮೇಲೆ), ಕಣ್ಣು, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಪ್ರಸೂತಿ ಮತ್ತು ಸ್ತ್ರೀ ರೋಗ ತಪಾಸಣೆ, ಎಲುಬು ಮತ್ತು ಸಂಧಿ ರೋಗ ತಪಾಸಣೆ, ಚರ್ಮ ರೋಗ, ತಲೆ ಮತ್ತು ಕುತ್ತಿಗೆ ಶಸ್ತ್ರ ಚಿಕಿತ್ಸೆ, ದಂತ ತಪಾಸಣೆ ತಪಾಸಣೆ ಮಾತ್ರ, ಆಹಾರ ಮತ್ತು ಪೌಷ್ಠಿಕ ಸಲಹೆ, ರಕ್ತದ ಒತ್ತಡ ತಪಾಸಣೆ, ರಕ್ತದ ಸಕ್ಕರೆ ತಪಾಸಣೆ ನಡೆಯಲಿದೆ.
ಈ ಶಿಬಿರದಲ್ಲಿ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ತಜ್ಞ ವೈದ್ಯರು ಭಾಗವಹಿಸಿ ಆರೋಗ್ಯ ಸಲಹೆ ನೀಡಲಿದ್ದಾರೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಸಚಿನ್ ಪ್ರಭು ಇವರನ್ನು ಸಂಪರ್ಕಿಸಬಹುದು, ದೂರವಾಣ ಸಂಖ್ಯೆ – 9964027565

