×
Our website is made possible by displaying online advertisements to our visitors. Please consider supporting us by whitelisting our website.
  • 9880645340

ನಿವೃತ್ತ ಸೀನಿಯರ್‌ ಹೆಲ್ತ್‌ ಇನ್ಸ್‌ಪೆಕ್ಟರ್‌ ಎಸ್‌.ಆರ್‌. ಬಂಗೇರ ನಿಧನ

ಪಡುಬಿದ್ರಿ : ಮೂಲತಃ ಸುಳ್ಯ ತಾಲೂಕು ಮಂಚಿಯವರಾದ ಪ್ರಸ್ತುತ ಉಚ್ಚಿಲ ನಿವಾಸಿಯಾಗಿರುವ ನಿವೃತ್ತ ಸೀನಿಯರ್‌ ಹೆಲ್ತ್‌ ಇನ್ಸ್‌ಪೆಕ್ಟರ್‌ ಎಸ್‌.ಆರ್‌. ಬಂಗೇರ (83) ಅವರು ಉಚ್ಚಿಲದ ಸ್ವಗೃಹದಲ್ಲಿ ಮಾ.10 ರಂದು ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರನ್ನು ಅಗಲಿರುತ್ತಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಿಷ್ಠಾವಂತ ಕಾರ್ಯಕರ್ತರಾಗಿದ್ದು, ಬಿಜೆಪಿ ಉಚ್ಚಿಲ ಸ್ಥಾನೀಯ ಸಮಿತಿಯ ಅಧ್ಯಕ್ಷರಾಗಿ, ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಯಕ್ಷಗಾನ ಮಂಡಳಿಯ ಮಾಜಿ ಅಧ್ಯಕ್ಷರಾಗಿ, ಬೆಳಪು ವ್ಯವಸಾಯ ಸಹಕಾರಿ ಸಂಘದ ನಿರ್ದೇಶಕರಾಗಿ, ಉಚ್ಚಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿ ಸೇವೆಯನ್ನು ಸಲ್ಲಿಸಿ ಜನಾನುರಾಗಿಯಾಗಿದ್ದರು.

Leave a Reply

Your email address will not be published. Required fields are marked *