ಪಡುಬಿದ್ರಿ: ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ
ಪೂರ್ವಭಾವಿ ಚಪ್ಪರ ಮಹೂರ್ತವು ಇಂದು ತಂತ್ರಿಗಳಾದ ಕೊಡವೂರು ಕಂಬಳಕಟ್ಟ ವೇ। ಮೂ। ಶ್ರೀ ರಾಧಾಕೃಷ್ಣ ಉಪಾಧ್ಯಾಯ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.
ಮಹಾಲಿಂಗೇಶ್ವರ ಮಹಾ ಗಣಪತಿ ದೇವರ ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ
ಚಪ್ಪರ ಮುಹೂರ್ತದಲ್ಲಿ ಭಾಗವಹಿಸಿ ಮಾತನಾಡಿದ ಡಾ: ಪ್ರಕಾಶ್ ಚಂದ್ರ ಶೆಟ್ಟಿ ಅವರು ಜೀರ್ಣೋದ್ಧಾರ ಕಾರ್ಯವು 11 ತಿಂಗಳಿನಲ್ಲಿ ಮುಕ್ತಾಯದ ಹಂತದಲ್ಲಿದ್ದು, ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮ ಕಲಶೋತ್ಸವು ಎ.23 ತಾರೀಖಿನಿಂದ ಮೆ.5 ತಾರೀಖಿನ ವರೆಗೆ 12 ದಿನಗಳ ಕಾಲ ನಡೆಯಲಿದೆ. ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ ಬಂದ ಭಕ್ತರು ಶ್ರೀ ದೇವಸ್ಥಾನದ ಅನ್ನ ಪ್ರಸಾದ
ಸ್ವೀಕರಿಸಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಕೃಪೆಗೆ ಪಾತ್ರರಾಗ ಬೇಕೇಂದರು.
ಚಪ್ಪರ ಮುಹೂರ್ತ ಕಾರ್ಯಕ್ರಮದಲ್ಲಿ ಅನುವಂಶಿಕ ಮೊಕ್ತೇಸರ ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ, ಕಾರ್ಯನಿರ್ವಹಣಾಧಿಕಾರಿ ರಾಜಗೋಪಾಲ ಉಪಾಧ್ಯಾಯ, ಜೀರ್ಣೋದ್ಧಾರ ಸಮಿತಿ ಉಪಾಧ್ಯಕ್ಷ ರವೀಂದ್ರನಾಥ ಜಿ.ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಮುರಳೀನಾಥ್ ಶೆಟ್ಟಿ,
ಸಮಿತಿ ಪ್ರಮುಖರಾದ ನವೀನಚಂದ್ರ ಜೆ.ಶೆಟ್ಟಿ, ವೈ.ಸುಕುಮಾರ್, ಶ್ರೀನಾಥ ಹೆಗ್ಡೆ, ನವೀನ್ ಎನ್.ಶೆಟ್ಟಿ, ಅಶೋಕ್ ಸಾಲ್ಯಾನ್ ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

