×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಜನಪರ ಆಡಳಿತದೊಂದಿಗೆ ಯಶಸ್ವೀ ಮೂರು ವರ್ಷ ಪೂರೈಸಿದ ರಾಜ್ಯ ಸರ್ಕಾರಕ್ಕೆ ಅಭಿನಂದನೆಗಳು: ಉದಯ ಶೆಟ್ಟಿ ಮುನಿಯಾಲು

ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಯಶಸ್ವಿಯಾಗಿ ಮೂರನೇ ವರ್ಷ ಪೂರೈಸಿರುವುದು ರಾಜ್ಯದ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅಭಿಪ್ರಾಯ ಪಟ್ಟಿದ್ದಾರೆ, ರಾಜ್ಯ ಸರ್ಕಾರವು ತ್ರೈವಾರ್ಷಿಕ ಪೂರೈಸಿದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಂಪುಟದ ಸಚಿವರುಗಳು, ಶಾಸಕರುಗಳನ್ನು ಅಭಿನಂದಿಸಿದ್ದಾರೆ.

ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದಲ್ಲಿ ಸರ್ಕಾರ ಜನಸಾಮಾನ್ಯರ ಬದುಕಿಗೆ ಸ್ಪಂದಿಸುವ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ.

ಕೊವಿಡ್ ನಂತರದ ದಿನಗಳಲ್ಲಿ ಉದ್ಯೋಗ ನಷ್ಟ, ಬೆಲೆ ಏರಿಕೆ, ಕುಸಿದ ಆರ್ಥಿಕತೆ ಮೊದಲಾದ ಸಮಸ್ಯೆಗಳಿಂದ ಹೈರಾಣಾಗಿದ್ದ ಜನ ಸಾಮಾನ್ಯರ ಬದುಕನ್ನು ಮೇಲೆತ್ತಲು ಕಾಂಗ್ರೆಸ್ ಸರ್ಕಾರವು ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ರಾಜ್ಯದ ಜನ ಸಾಮಾನ್ಯರಿಗೆ ಆಸರೆಯಾಗಿದ್ದು ಈಗ ಇತಿಹಾಸ. ಪಂಚ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಮೂಲಕ ಬಡವರು, ಮಹಿಳೆಯರು, ಯುವಜನತೆ ಮತ್ತು ದುರ್ಬಲ ವರ್ಗಗಳಿಗೆ ನೇರ ಪ್ರಯೋಜನ ತಲುಪಿದ ಸಮಾಧಾನ ನಮಗಿದೆ.

ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಪರ ಆಡಳಿತದ ದಿಕ್ಕಿನಲ್ಲಿ ಸರ್ಕಾರ ಕೈಗೊಂಡಿರುವ ಕ್ರಮಗಳು ಜನರಲ್ಲಿ ವಿಶ್ವಾಸ ಮೂಡಿಸಿವೆ. ರೈತರು, ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ಮಧ್ಯಮ ವರ್ಗದವರ ಹಿತಾಸಕ್ತಿಯನ್ನು ಕಾಪಾಡುವ ಕೆಲಸ ಸರ್ಕಾರದಿಂದ ನಿರಂತರವಾಗಿ ನಡೆಯುತ್ತಿರುವುದು ಕಾಂಗ್ರೆಸ್ ಪಕ್ಷದ ಬದ್ದತೆಗೆ ಸಾಕ್ಷಿ.

ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದು, ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿಸಲು ಸರ್ಕಾರ ಯಶಸ್ವಿಯಾಗಲಿ, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಮೂರು ವರ್ಷಗಳನ್ನು ಪೂರೈಸಿದ ಈ ಸಂದರ್ಭದಲ್ಲಿ ಮುಖ್ಯಮಂತ್ರಿ , ಉಪ ಮುಖ್ಯಮಂತ್ರಿ ಮತ್ತು ಸಂಪುಟದ ಎಲ್ಲಾ ಸಚಿವರುಗಳು ಮತ್ತು ಶಾಸಕರುಗಳಿಗೆ ಶುಭಾಶಯಗಳೊಂದಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *