×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಪ್ರತಿಯೊಬ್ಬರಿಗೂ ಅವಕಾಶ ಇರುತ್ತದೆ – ಅದನ್ನು ಗುರುತಿಸಲು ಕಲಿಯಬೇಕು – ವೀರು ಶೆಟ್ಟಿ

ಉಜಿರೆ, ಮೇ 23: “ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಆಶಯದಂತೆ ರುಡ್‌ಸೆಟ್ ಸಂಸ್ಥೆ ಗ್ರಾಮೀಣ ಯುವಜನರಲ್ಲಿ ಸ್ವಾವಲಂಬನೆಯ ಮನೋಭಾವ ಬೆಳೆಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ವ್ಯವಹಾರ ಹಾಗೂ ಉದ್ಯಮ ಕ್ಷೇತ್ರದಲ್ಲಿ ಅವಕಾಶಗಳು ಎಲ್ಲರಿಗೂ ಸಮಾನವಾಗಿ ಲಭ್ಯವಿರುತ್ತವೆ. ಆದರೆ ಆ ಅವಕಾಶಗಳನ್ನು ಗುರುತಿಸಿ, ಬಳಸಿಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳುವುದು ಮುಖ್ಯ” ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‌ನ ಕಾರ್ಯದರ್ಶಿಗಳಾದ ಶ್ರೀ ವೀರು ಶೆಟ್ಟಿ ಅಭಿಪ್ರಾಯಪಟ್ಟರು. ವ್ಯವಹಾರ ನಡೆಸುವಾಗ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಅದರ ನಿಭಾಯಿಸುವ ಕೌಶಲ್ಯ ನಮ್ಮ‌ಹತ್ತಿರ ಇರಬೇಕು ಎಂದರು.

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ವತಿಯಿಂದ 30 ದಿನಗಳ ಕಾಲ ಆಯೋಜಿಸಲಾದ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರುಡ್‌ಸೆಟ್ ಸಂಸ್ಥೆಗಳ ಕೇಂದ್ರ ಕಚೇರಿ ಉಜಿರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಪಿ.‌ವಿಜಯ ಕುಮಾರ್ ಮಾತನಾಡಿ, “ರುಡ್‌ಸೆಟ್ ಸಂಸ್ಥೆಯ ತರಬೇತಿಗಳು ಕೇವಲ ಕೌಶಲ್ಯಾಭಿವೃದ್ಧಿಗೆ ಮಾತ್ರ ಸೀಮಿತವಾಗದೆ, ವ್ಯಕ್ತಿತ್ವ ವಿಕಸನ ಹಾಗೂ ಉದ್ಯಮಶೀಲ ಮನೋಭಾವ ಬೆಳೆಸುವ ದಿಕ್ಕಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ತರಬೇತಿಯ ಮೂಲಕ ಪಡೆದ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಬೇಕು” ಎಂದು ಹೇಳಿದರು.
ಸಂಸ್ಥೆಯ ನಿರ್ದೇಶಕರಾದ ಅಜೇಯ ಅತಿಥಿಗಳನ್ನು ಸ್ವಾಗತಿಸಿದರು. ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿದರು.ಹಿರಿಯ ಉಪನ್ಯಾಸಕರಾದ ಕೆ.ಕರುಣಾಕರ ಜೈನ್ ಧನ್ಯವಾದ ಅರ್ಪಿಸಿದರು. ಕುಮಾರಿ ಶ್ರವಣಿ ಮತ್ತು ಕುಮಾರಿ ಜಲಜಾಕ್ಷಿ ಅವರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು.
ಈ ಸಂದರ್ಭದಲ್ಲಿ ಶಿಬಿರಾರ್ಥಿಗಳಾದ ಉದಯ ಹಾಗೂ ನಿತೀಶ್ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡು, ರುಡ್‌ಸೆಟ್ ಸಂಸ್ಥೆಯ ತರಬೇತಿ ಜೀವನದಲ್ಲಿ ಹೊಸ ಆತ್ಮವಿಶ್ವಾಸ ಮತ್ತು ಉದ್ಯೋಗದ ದಿಕ್ಕನ್ನು ನೀಡಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *