×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆ ಶಿರ್ವ: *2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಸನ್ಮಾನ ಸಮಾರಂಭ.*

  ಫೈಝುಲ್ ಇಸ್ಲಾಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸುವ ಸಲುವಾಗಿ ಸನ್ಮಾನ ಕಾರ್ಯಕ್ರಮವನ್ನು ಅಲ್ ಸುಹೇಮಿ ಸಭಾಭವನದಲ್ಲಿ ಅದ್ದೂರಿಯಾಗಿ ಆಯೋಜಿಸಲಾಯಿತು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಜನಾಬ್ ಉಮರ್ ಇಸ್ಮಾಯಿಲ್ ಶಿರ್ವ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳ ಶ್ರಮ ಹಾಗೂ ಉತ್ತಮ ಸಾಧನೆಯನ್ನು ಪ್ರಶಂಸಿಸಿ ಹಿತನುಡಿಗಳನ್ನು ಹೇಳಿದರು. ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸದಲ್ಲಿಯೂ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಿದರು.
ಶಾಲಾ ಅಧ್ಯಕ್ಷರಾದ ಜನಾಬ್ ಖಾಲಿದ್ ಮುಹಮ್ಮದ್ ಮಾತನಾಡಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. ಮೌಲಾನ ಇಬ್ರಾಹಿಂ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ಮತ್ತು ಲೌಕಿಕ ಶಿಕ್ಷಣದ ಮಹತ್ವದ ಕುರಿತು ಮಾಹಿತಿ ನೀಡಿ ಉತ್ತಮ ಮಾರ್ಗದರ್ಶನ ನೀಡಿದರು.
ವಿದ್ಯಾರ್ಥಿಗಳ ಪರಿಶ್ರಮ ಮತ್ತು ಸಾಧನೆಯನ್ನು ಗುರುತಿಸಿ ಸ್ಮರಣಿಕೆಗಳು ಹಾಗೂ ಹಣ್ಣು ಹಂಪಲುಗಳನ್ನು ನೀಡಿ ಅಭಿನಂದಿಸಲಾಯಿತು. ಕಾರ್ಯಕ್ರಮವು ಸಂಭ್ರಮ ಮತ್ತು ಸಂತಸದ ವಾತಾವರಣದಲ್ಲಿ ನೆರವೇರಿತು.
ವೇದಿಕೆಯಲ್ಲಿ ಆಡಳಿತ ಮಂಡಳಿ ಅಧ್ಯಕ್ಷರಾದ ಜನಾಬ್ ಖಾಲಿದ್ ಮುಹಮ್ಮದ್,ಉಪಾಧ್ಯಾಕ್ಷರಾದ ಜನಾಬ್ ಉಮರ್ ಇಸ್ಮಾಯಿಲ್, ಮೌಲಾನ  ಇಬ್ರಾಹಿಂ,ಮೌಲಾನ ಅಝ್ಮತುಲ್ಲ ಹಾಗೂ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಖೈರುನ್ನಿಸಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಪೋಷಕರು ಹಾಗೂ ಗಣ್ಯರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಶಿಫಾ ಶೇಖ್ ನಿರೂಪಿಸಿ, ಅಮ್ರತುಲ್ ವಫಾ ಸ್ವಾಗತಿಸಿ, ಶ್ರೀಮತಿ ಮನೀಷಾ ವಂದಿಸಿದರು.

Leave a Reply

Your email address will not be published. Required fields are marked *