ಬೆಂಗಳೂರಿನ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ)ನ ವತಿಯಿಂದ ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಕಾರದೊಂದಿಗೆ, ಉಡುಪಿ ಜಿಲ್ಲೆಯ ೨೦೦ಅನುದಾನಿತ ಶಾಲೆಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ೨೦,೦೦೦ ಜೊತೆ ಶಾಲಾ ಸಮವಸ್ತ್ರಗಳ ಉಚಿತ ವಿತರಣೆ ಹಾಗೂ ಹೆಗ್ಗುಂಜೆ ರಾಜೀವ ಶೆಟ್ಟಿ ವಿದ್ಯಾಪೋಷಕ ಪ್ರಶಸ್ತಿ ಪ್ರದಾನ ಮತ್ತು ವೆಬ್‌ಸೈಟ್ ಅನಾವರಣ ಕಾರ್ಯಕ್ರಮವನ್ನು ದಿನಾಂಕ ೨೦-೦೬-೨೦೨೬ರಂದು ಬೆಳಿಗ್ಗೆ ೧೦.೩೦ಕ್ಕೆ ಉಡುಪಿ ಶಾರದಾ ಮಂಟಪ ರಸ್ತೆಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ .ಕಾರ್ಯಕ್ರಮವನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಉದ್ಘಾಟಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಉಡುಪಿ ಶಾಸಕರಾದ ಶ್ರೀ ಯಶಪಾಲ್ ಎ.ಸುವರ್ಣ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಶ್ರೀ ಹರಿರಾಮ

