×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿ ಗ್ರಾಮೀಣ ಬಂಟರ ಸಂಘದಿಂದ ‘ಆಟಿಡೊಂಜಿ ದಿನ’ ಆಚರಣೆ

ಶಿರ್ವ: ಆಟಿ ನಮಗೆ ಶಕ್ತಿ ತುಂಬುವ ಕಾಲ. ಹಿಂದಿನ ಕಾಲದಲ್ಲಿ ಹಿರಿಯರು ಆರೋಗ್ಯಯುತ ಆಹಾರ ಸೇವಿಸಿ ಸದೃಢರಾಗಿದ್ದು, ಅನಾರೋಗ್ಯದಿಂದ ದೂರವಿದ್ದರು. ಇಂದು ಮದ್ದುಗಳೇ ತಿನಿಸುಗಳಾಗಿರುವ ಕಾಲ ಬದಲಿ, ತಿನಿಸುಗಳೇ ಮದ್ದಾಗುವ ಕಾಲ ಬರಬೇಕು ಎಂದು ತುಳುವರ್ಲ್ಡ್ ಫೌಂಡೇಶನ್ ನಿರ್ದೇಶಕ ಡಾ. ರಾಜೇಶ್ ಕೃಷ್ಣ ಆಳ್ವ ಹೇಳಿದರು.
ಕುಂತಳನಗರದ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಸಭಾಂಗಣದಲ್ಲಿ ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಆಯೋಜಿಸಲಾಗಿದ್ದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತುಳುನಾಡಿನ ಮೊದಲ ಸಮರಕಲೆ ಕಲರಿ. ತುಳುನಾಡಿನಲ್ಲಿ ವೃತ್ತಿ ಆಧಾರಿತವಾಗಿ ಜಾತಿ ವ್ಯವಸ್ಥೆ ಇತ್ತು. ನಮ್ಮ ನಾಡಿನ ಗತವೈಭವವನ್ನು ಸಾರುವ ಕುರುಹುಗಳ ಕುರಿತು ಬೆಳಕು ಚೆಲ್ಲುವ ಅಗತ್ಯವಿದೆ. ಇದರೊಂದಿಗೆ ನಮ್ಮ ಮಾತೃಭಾಷೆ ತುಳುವಿನ ಬಗ್ಗೆಯೂ ಪ್ರತಿಯೊಬ್ಬರಲ್ಲೂ ಅಭಿಮಾನ ಮೂಡಬೇಕು ಎಂದರು.
ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ ಮಾತನಾಡಿ, ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಂಘದ ಸೇವೆ ನಿರಂತರವಾಗಿ ನಡೆಯುತ್ತಿದೆ. ಸಂಘದಲ್ಲಿ ಸುಮಾರು ಒಂದು ಸಾವಿರ ಸದಸ್ಯರಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಮನೆ ನಿರ್ಮಾಣಕ್ಕೆ ನೆರವು ಸೇರಿದಂತೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು.
ಕಳೆದ ನಾಲ್ಕು ವರ್ಷಗಳಲ್ಲಿ ಗ್ರಾಮೀಣ ಭಾಗದಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಿ ಸುಮಾರು 3,700 ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲಾಗಿದೆ. ಆಗಸ್ಟ್ 9ರಂದು 5ನೇ ಉದ್ಯೋಗ ಮೇಳ ನಡೆಯಲಿದ್ದು, ಇದರ ಜೊತೆಗೆ ಆಟಿಯ ಸಂಸ್ಕೃತಿ ಮತ್ತು ಆಚರಣೆಗಳನ್ನು ಪರಿಚಯಿಸುವ ಉದ್ದೇಶದಿಂದ ‘ಆಟಿಡೊಂಜಿ ದಿನ’ ಆಯೋಜಿಸಲಾಗಿದೆ ಎಂದು ಹೇಳಿದರು.
ಎಸ್‌ಎಸ್‌ಎಲ್‌ಸಿ, ಪಿಯುಸಿ ಸಾಧಕರಿಗೆ ಗೌರವ


ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಸಾನ್ವಿ ಶೆಟ್ಟಿ, ಪನ್ನಾ ಪಿ. ಶೆಟ್ಟಿ, ಆದಿತ್ಯ ಬಿ. ಶೆಟ್ಟಿ, ಪ್ರಾಪ್ತಿ ಎಸ್. ಶೆಟ್ಟಿ, ಪ್ರಗತಿ ಶೆಟ್ಟಿ, ನವ್ಯಾ ಶೆಟ್ಟಿ ಹಾಗೂ ಮಾನ್ಯ ಶೆಟ್ಟಿ ಅವರನ್ನು ಗೌರವಿಸಲಾಯಿತು.
ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಹಿರಿಯ ನ್ಯಾಯವಾದಿ ಎಂ. ಶಾಂತರಾಮ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಸಾಫಲ್ಯ ಟ್ರಸ್ಟ್‌ನ ಪ್ರವರ್ತಕಿ ನಿರುಪಮಾ ಪ್ರಸಾದ್ ಶೆಟ್ಟಿ, ಸಂಘದ ಕಾರ್ಯಾಧ್ಯಕ್ಷ ಪದ್ಮನಾಭ ಹೆಗ್ಡೆ, ಮಾಜಿ ಅಧ್ಯಕ್ಷರಾದ ಅಲೆವೂರ್ ಶ್ರೀಧರ್ ಶೆಟ್ಟಿ ಹಾಗೂ ಹೇಮಂತ್ ಶೆಟ್ಟಿ, ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಖಜಾಂಚಿ ರಂಜನಿ ಹೆಗ್ಡೆ ಉಪಸ್ಥಿತರಿದ್ದರು.
ಸಂಘದ ಕಾರ್ಯದರ್ಶಿ ವಿಜಿತ್ ಶೆಟ್ಟಿ ಕೊರಂಗ್ರಪಾಡಿ ಸ್ವಾಗತಿಸಿದರು. ನಿಟ್ಟೆ ವಿಶ್ವವಿದ್ಯಾಲಯದ ಪ್ರೊ. ಸುಧೀರ್ ರಾಜ್ ಕಾರ್ಯಕ್ರಮ ನಿರೂಪಿಸಿದರು. ಸಂಘದ ಕಾರ್ಯಾಧ್ಯಕ್ಷ ಪದ್ಮನಾಭ ಹೆಗ್ಡೆ ವಂದಿಸಿದರು.

Leave a Reply

Your email address will not be published. Required fields are marked *