×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದಕ್ಷಿಣ) ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಿರ್ವ ವೆಂಕಟರಮಣ ಭಟ್ ರವರು ದಿವಂಗತ ದೇವರಾಜ್ ಅರಸ್ ಹಾಗೂ ದಿವಂಗತ ರಾಜೀವ ಗಾಂಧಿಯವರ ಕಾರ್ಯಕ್ಷಮತೆಯ ಬಗ್ಗೆ ಸ್ಮರಿಸಿದರು. ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಶ್ರೀ ವೈ. ಸುಕುಮಾರ್ ಅವರು ಮಾತನಾಡಿ, ದಿ. ರಾಜೀವ್ ಗಾಂಧಿಯವರು ಯುವ ಭಾರತದ ಕನಸು ಕಂಡ ದೂರದೃಷ್ಟಿಯ ನಾಯಕರು. ದೇಶದ ಏಕತೆ, ಶಾಂತಿ, ಸೌಹಾರ್ದತೆ ಹಾಗೂ ಆಧುನಿಕ ಭಾರತದ ನಿರ್ಮಾಣಕ್ಕೆ ಅವರು ನೀಡಿದ ಕೊಡುಗೆ ಅಪಾರ. ತಂತ್ರಜ್ಞಾನ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಹೊಸ ದಿಕ್ಕು ನೀಡಿದ ಅವರ ಚಿಂತನೆಗಳು ಇಂದಿಗೂ ಯುವ ಪೀಳಿಗೆಗೆ ಸ್ಫೂರ್ತಿಯಾಗಿವೆ ಎಂದು ಹೇಳಿದರು.

ಅದೇ ರೀತಿ, ಹಿಂದುಳಿದ ವರ್ಗಗಳ ಆಶಾಕಿರಣ ಹಾಗೂ ಸಾಮಾಜಿಕ ನ್ಯಾಯದ ಹರಿಕಾರರಾದ ದಿ. ದೇವರಾಜ ಅರಸು ಅವರು ಭೂಸುಧಾರಣಾ ಕಾಯ್ದೆ ಸೇರಿದಂತೆ ಹಲವು ಜನಪರ ಸುಧಾರಣೆಗಳ ಮೂಲಕ ಅಸಂಖ್ಯಾತ ಬಡವರು, ರೈತರು ಹಾಗೂ ಹಿಂದುಳಿದ ವರ್ಗಗಳ ಬದುಕಿಗೆ ಹೊಸ ಭರವಸೆ ನೀಡಿದ ಮಹಾನ್ ನಾಯಕರು ಎಂದು ಸ್ಮರಿಸಿದರು.

ಈ ಸಂದರ್ಭದಲ್ಲಿ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಅವರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ಅವರ ಜನಪರ ಆದರ್ಶಗಳು ಹಾಗೂ ಸಾಮಾಜಿಕ ನ್ಯಾಯದ ಆಶಯಗಳನ್ನು ಮುಂದುವರಿಸುವ ಸಂಕಲ್ಪ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಮಾನ್ಯ ವಿನಯ್ ಕುಮಾರ್ ಸೊರಕೆ ಯವರ ಆಪ್ತ ಕಾರ್ಯದರ್ಶಿ ಯಾದ ಅಶೋಕ್ ನಾಯರಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ‌ ಕಾರ್ಯದರ್ಶಿಯಾದ ಸುಚರಿತಾ ಎಲ್ ಅಮೀನ್ , ಪಡುಬಿದ್ರಿ ಗ್ರಾಮೀಣ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾದ ಸುನಂದಾ ದೇವಾಡಿಗ, ಕಾಪು ಪುರಸಭೆ ಸದಸ್ಯರಾದ ಬಾಬಣ್ಣ ನಾಯಕ್, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ನಿಯಾಝ್, ಕಾಪು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರಾದ ಪ್ರಭಾಕರ ಆಚಾರ್ಯ, ಕಾಪು ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಸದಸ್ಯರಾದ ಶ್ರೇಯಸ್ ಪೂಜಾರಿ, ವ ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *