×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತ ಪೂಜೆ

ಉಡುಪಿ ಜಿಲ್ಲೆ, ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದಿನಾಂಕ 21.08.2026ರ ಶುಕ್ರವಾರದಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ.

ಅಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಕಲಶ ಪ್ರತಿಷ್ಠೆ ನೆರವೇರಲಿದ್ದು, ನಂತರ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 12.00 ಗಂಟೆಗೆ ಸರಿಯಾಗಿ ಶ್ರೀ ಕ್ಷೇತ್ರದಲ್ಲಿ ಮಹಾಪೂಜೆ ನೆರವೇರಲಿದ್ದು, ತದನಂತರ ಮಹಾ ಅನ್ನಸಂತರ್ಪಣೆ ನಡೆಯಲಿದೆ.

ಈ ಪವಿತ್ರ ಪೂಜಾ ಕಾರ್ಯಕ್ರಮದಲ್ಲಿ ಮಹಿಳೆಯರು ಸೇರಿದಂತೆ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಮಹಾಲಕ್ಷ್ಮೀ ಅಮ್ಮನವರ ದಿವ್ಯ ಕೃಪೆಗೆ ಪಾತ್ರರಾಗುವಂತೆ ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *