ಜಮಾ ಆತೆ ಇಸ್ಲಾಮಿ ಹಿಂದ್ ಕರ್ನಾಟಕದ ವತಿಯಿಂದ ದಿನಾಂಕ 26.08.2026 ರಿಂದ. 06.09.2026 ರ ತನಕ ಪ್ರವಾದಿ ಮುಹಮ್ಮದ್ (ಸ. ಅ. ಸ. ) ರವರ ಜನ್ಮ ದಿನದ ಪ್ರಯುಕ್ತ ರಾಜ್ಯದ್ಯಂತ ಸೀರತ್ ಅಭಿಯಾನ ನಡೆಯಲಿದೆ. ಅಭಿಯಾನದ ಶೀರ್ಷಿಕೆ *ಕ್ರಾಂತಿಯ ಜ್ಯೋತಿ ಪ್ರವಾದಿ ಮುಹಮ್ಮದ್ (ಸ ) ಎಂಬುದಾಗಿದೆ.
ಪ್ರವಾದಿ ಮುಹಮ್ಮದ್ (ಸ ) ರವರು ಜಗತ್ತಿನಲ್ಲಿ ತಂದ ಸಮಗ್ರ ಕ್ರಾಂತಿಯು ಸತ್ಯ, ನ್ಯಾಯ, ಕರುಣೆ, ಮಾನವ ಸಮಾನತೆ, ಮಾನವ ಘನತೆ ಹಾಗೂ ಮಾನವ ಕುಲದ ಏಕತೆಯ ಮೇಲೆ ಸ್ಥಾಪಿತವಾಗಿದೆ. ಅವರು ಜನರ ಮನಸ್ಸನ್ನು ಸಂಸ್ಕರಿಸಿ, ಅವರ ನೈತಿಕತೆ ಮತ್ತು ಚಾರಿತ್ರಿಯವನ್ನು ಶುದ್ದಿಕರಿಸುವ ಮೂಲಕ ವ್ಯಕ್ತಿಗಳನ್ನು, ಸಮಾಜವನ್ನು ಪರಿವರ್ತಿಸಿದರು. ಅವರ ಕ್ರಾಂತಿಯು ಅಪ್ಪಟ ಮಾನವೀಯ ಕ್ರಾಂತಿಯಾಗಿತ್ತು ಹಾಗೂ ಮಾನವ ಜೀವನದ ಅಧ್ಯಾತ್ಮಿಕ, ಸಾಮಾಜಿಕ, ಕೌಟುಂಬಿಕ, ಆರ್ಥಿಕ, ಶೈಕ್ಷಣಿಕ, ಆಡಳಿತ ಹೀಗೆ ಎಲ್ಲಾ ಕ್ಷೇತ್ರಗಳನ್ನು ಬೆಳಗಿಸಿದ ಕ್ರಾಂತಿಯಾಗಿತ್ತು. ಸುಭಿಕ್ಷೆ ಮತ್ತು ನಿರ್ಭಯತ್ವದ ಸಮಾಜ ಅವರ ಗುರಿಯಾಗಿತ್ತು.
ಪ್ರವಾದಿ ಮುಹಮ್ಮದ್ (ಸ ) ರವರ ಈ ಸಂದೇಶವನ್ನು ಕನ್ನಡ ಜನತೆಗೆ ಪರಿಚಯಿಸುವುದು, ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು, ಪರಸ್ಪರ ಭಾಂದವ್ಯವನ್ನು ಬಲ ಪಡಿಸುವುದು ಈ ಅಭಿಯಾನದ ಉದ್ದೇಶವಾಗಿದೆ ಎಂದು ಜಮಾ ಆತೆ ಇಸ್ಲಾಮಿ ಹಿಂದ್ ಕಾಪು ಶಾಖೆಯ ಅಧ್ಯಕ್ಷರು ಆದ ಅನ್ವರ್ ಅಲಿ ಯವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಈ ಸಂಧರ್ಭದಲ್ಲಿ ಖ್ಯಾತ ಸಾಹಿತಿ ಹಾಗೂ ಗ್ರಂಥಕರ್ತ ಶ್ರೀ ಯೋಗೀಶ್ ಮಾಸ್ಟರ್ ರವರು ಬರೆದ “ಮಾನವ ಮನಸ್ಸಿನ ಕೃಷಿಕ – ಮನದೊಡೆಯ ಪ್ರವಾದಿ ಮುಹಮ್ಮದ್ (ಸ )” ಎಂಬ ಪುಸ್ತಕವನ್ನು ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು ಆದ ಅಬ್ದುಲ್ ಹಮೀದ್ ಪಡುಬಿದ್ರಿ ಯವರು ಬಿಡುಗಡೆಗೊಳಿಸಿದರು. ಹಾಗೂ ವಾರ್ತಾಭಾರತಿ ದಿನ ಪತ್ರಿಕೆಯ ಪ್ರಧಾನ ಸಂಪಾದಕರು ಆದ ಅಬ್ದುಸ್ಸಲಾಮ್ ಪುತ್ತಿಗೆಯವರು ಬರೆದ “ಸಮಗ್ರ ಕ್ರಾಂತಿಯ ಜ್ಯೋತಿ ಬೆಳಗಿದ ಪೈಗಂಬರ್ ಮುಹಮ್ಮದ್ (sa)” ಎಂಬ ಕೃತಿಯನ್ನು ಪ್ರೆಸ್ ಕ್ಲಬ್ ನ ಹಿರಿಯ ಸದಸ್ಯರು ಆದ ಬಾಲಕೃಷ್ಣ ಪೂಜಾರಿ ಯವರು ಬಿಡುಗಡೆಗೊಳಿಸಿದರು.
ಅಭಿಯಾನದ ಪ್ರಯುಕ್ತ ಕಾಪು ಶಾಖೆಯಲ್ಲಿ ಆಸ್ಪತ್ರೆಗಳ ಸಂದರ್ಶನ, ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ, ಸ್ವಚ್ಛತಾ ಕಾರ್ಯಕ್ರಮ, ಅನಾಥಶ್ರಮ ಭೇಟಿ ,. ಗಣ್ಯರ ಸಭೆ, ಸೀರತ್ ಪ್ರವಚನ ಸಭೆ , ಮಸೀದಿಯಲ್ಲಿ ಈ ಮೇಲಿನ ಕೃತಿಗಳ ಬಿಡುಗಡೆ, ಭಾಷಣ ಸ್ಪರ್ಧೆ , ಪ್ರಬಂಧ ಸ್ಪರ್ಧೆ ಹಮ್ಮಿಕೊಲಾಗಿದೆ
ಪತ್ರಿಕಾಗೋಷ್ಟಿಯಲ್ಲಿ ಮುಹಮ್ಮದ್ ಇಕ್ಬಾಲ್ ಸಾಹೇಬ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮುಹಮ್ಮದ್ ಅಲಿ ಯವರು ಧನ್ಯವಾದ ನೀಡಿದರು. ಮುಹಮ್ಮದ್ ಹಾಶಿಮ್ ಸಾಹೇಬ್ ಮತ್ತು ಮುಹಮ್ಮದ್ ಶರೀಫ್ ಶೇಕ್ ಉಪಸ್ಥಿತರಿದ್ದರು.

