×
Our website is made possible by displaying online advertisements to our visitors. Please consider supporting us by whitelisting our website.
  • 9880645340

ರುಡ್‌ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಕೋಳಿ ಸಾಕಾಣಿಕೆ ತರಬೇತಿ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಸಿದ್ಧವನದಲ್ಲಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಗ್ರಾಮೀಣ ನಿರುದ್ಯೋಗಿ ಯುವಕ–ಯುವತಿಯರು ಹಾಗೂ ಸ್ವಯಂ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ಕೋಳಿ ಸಾಕಾಣಿಕೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಸೆಪ್ಟೆಂಬರ್ 7ರಿಂದ 18ರವರೆಗೆ 12 ದಿನಗಳ ಕಾಲ ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 9.30ರಿಂದ ಸಂಜೆ 5.30ರವರೆಗೆ ತರಬೇತಿ ನಡೆಯಲಿದ್ದು, ತರಬೇತಿಗೆ ಹಾಜರಾಗುವ ಅಭ್ಯರ್ಥಿಗಳಿಗೆ ಉಚಿತ ಊಟ ಹಾಗೂ ವಸತಿ ಸೌಲಭ್ಯ ಕಲ್ಪಿಸಲಾಗಿದೆ.
ಕೋಳಿ ಸಾಕಾಣಿಕೆ ಆರಂಭಿಸಲು ಅಗತ್ಯವಿರುವ ವೈಜ್ಞಾನಿಕ ವಿಧಾನಗಳು, ಕೋಳಿ ತಳಿಗಳ ಆಯ್ಕೆ, ಆಹಾರ ನಿರ್ವಹಣೆ, ಆರೋಗ್ಯ ಮತ್ತು ರೋಗ ನಿಯಂತ್ರಣ, ಶೆಡ್ ನಿರ್ವಹಣೆ, ಮೊಟ್ಟೆ ಹಾಗೂ ಮಾಂಸ ಉತ್ಪಾದನೆ, ಮಾರುಕಟ್ಟೆ ವ್ಯವಸ್ಥೆ, ಲೆಕ್ಕಪತ್ರ ನಿರ್ವಹಣೆ ಮತ್ತು ಸ್ವಯಂ ಉದ್ಯಮವಾಗಿ ಕೋಳಿ ಸಾಕಾಣಿಕೆಯನ್ನು ಅಭಿವೃದ್ಧಿಪಡಿಸುವ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುವುದು.
18ರಿಂದ 50 ವರ್ಷದೊಳಗಿನವರು, ವಿಶೇಷವಾಗಿ ಉದ್ಯೋಗ ಅಥವಾ ಸ್ವಯಂ ಉದ್ಯೋಗದ ಅವಕಾಶಕ್ಕಾಗಿ ಪ್ರಯತ್ನಿಸುತ್ತಿರುವ ಗ್ರಾಮೀಣ ಯುವಜನರು ಹಾಗೂ ಮಹಿಳೆಯರು ತರಬೇತಿಯ ಸದುಪಯೋಗ ಪಡೆದುಕೊಳ್ಳಬಹುದು.
ಆಸಕ್ತರು ತರಬೇತಿಗೆ ಮುಂಚಿತವಾಗಿ ನೋಂದಾಯಿಸಿಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 6364561982

Leave a Reply

Your email address will not be published. Required fields are marked *