×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮಾಧವ ಮಂಗಲ ಪೂಜಾರ್ಯರ ಪುತ್ಥಳಿ ಅನಾವರಣ, ವಿದ್ಯಾರ್ಥಿನಿಲಯ ಉದ್ಘಾಟನೆ

ಮೊಗವೀರ ಸಮಾಜ ಶ್ರಮಜೀವಿಗಳ ಸಮಾಜ ವಾಗಿದ್ದು, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಹೋರಾಟ, ಶಿಕ್ಷಣ ಮತ್ತು ಸಂಘಟನೆ ಸಮಾಜದ ಪ್ರಗತಿಗೆ ಬಹಳ ಮುಖ್ಯ. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಮಕ್ಕಳು ಶಿಕ್ಷಣ ಪಡೆದು ವಿದ್ಯಾವಂತರಾಗ ಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.

ಉಚ್ಚಿಲ ಮಹಾಲಕ್ಷೀ ದೇವಸ್ಥಾನದ ಆವರಣದಲ್ಲಿ ನಿರ್ಮಾಣ ಗೊಂಡಿರುವ ಮೊಗವೀರ ಸಮುದಾಯದ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಪುತ್ಥಳಿ ಅನಾವರಣ, ವಿದ್ಯಾರ್ಥಿ ನಿಯಲದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣೆಯನ್ನು ಶುಕ್ರವಾರ ನೆರವೇರಿಸಿ ಅವರು ಮಾತನಾಡುತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,…

ಸಮಾಜದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನಡೆದಿವೆ. ಮುಂದೆಯೂ ಉತ್ತಮ ಕಾರ್ಯಗಳನ್ನು ಮುಂದುವರಿಸಿಕೊಂಡು ಹೋಗಬೇಕು. ಯಾವುದೇ ಸರ್ಕಾರವಿರಲಿ, ಕರಾವಳಿಯ ಜನರು ತಮ್ಮ ಹಕ್ಕು ಹಾಗೂ ಅಭಿವೃದ್ಧಿಯ ಅಗತ್ಯಗಳನ್ನು ಜಾಣ್ಮೆಯಿಂದ ಮುಂದಿಡುತ್ತಿದ್ದಾರೆ. ಸಮಾಜದ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಅನುದಾನ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಕರಾವಳಿಯ ಇತಿಹಾಸದಲ್ಲಿ ಮೊದಲ ಬಾರಿಗೆ ಎಂಬಂತೆ ಮುಖ್ಯಮಂತ್ರಿ ಗಳು ಸಚಿವ ಸಂಪುಟ ನಡೆಸಿ ಈ ಭಾಗದ ಹಲವು ವರ್ಷಗಳ ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ 2 ನೇ ಅಧಿಕೃತ ಭಾಷೆಯ ಮಾನ್ಯತೆ ನೀಡಿರುವುದು ಐತಿಹಾಸಿಕ ಸಂಗತಿಯಾಗಿದೆ. ಇದರೊಂದಿಗೆ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆ ಕೂಡ ಹಣ ಮೀಸಲಿರಿಸಲಾ ಗಿದ್ದು ಈ ಭಾಗದ ಅಭಿವೃದ್ಧಿಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ.ಜಿ.ಶಂಕರ್ ಮಾತನಾಡಿ, ಸುಮಾರು 3 ಕೋಟಿ ವೆಚ್ಚದಲ್ಲಿ, 31 ಅಡಿ ಎತ್ತರ ಹಾಗೂ ಸುಮಾರು 14 ಸಾವಿರ ಕೆ.ಜಿ. ತೂಕದ ಕಂಚನ್ನು ಬಳಸಿ ಭವ್ಯ ಪುತ್ಥಳಿಯನ್ನು ನಿರ್ಮಿಸಲಾಗಿದೆ. ಸುಮಾರು 6 ಕೋಟಿ ರೂ ವೆಚ್ಚದಲ್ಲಿ ಹಾಸ್ಟೆಲ್ ನಿರ್ಮಾಣ ಮಾಡಿದ್ದು, ಪ್ರತಿವರ್ಷ ಅತ್ಯುತ್ತಮ ರೀತಿಯಲ್ಲಿ ದಸರಾವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಸರಕಾರದಿಂದ ಕ್ಷೇತ್ರಕ್ಕೆ ಬರಬೇಕಾದ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಹಾಗೂ ಉಚ್ಚಿಲ ದಸರಾಕ್ಕೆ ಸರಕಾರ ಪ್ರತಿ ವರ್ಷ 2 ಕೋಟಿ ರೂ ಗಳನ್ನು ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಮುದಾಯದ ಗುರಿಕಾರ ಬಂಧುಗಳಿಗೆ ಧನ ಸಹಾಯ ವಿತರಣೆ ಮಾಡಲಾಯಿತು. ಉಚ್ಚಿಲ ದಸರಾದ ಸಂದರ್ಭದಲ್ಲಿ ಆಯೋಜಿಸಲಾದ ರಾಜ್ಯ ಮಟ್ಟದ ದೇಹದಾಡ್ಯ ಸ್ಪರ್ಧೆಯ ಪೋಸ್ಟರ್ ಅನಾವರಣ ಮಾಡಲಾಯಿತು.

ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಮೆಂಡನ್, ಸಮುದಾಯದ ಮುಖಂಡರಾದ ಆನಂದ್ ಸಿ.ಕುಂದರ್, ಪ್ರಸಾದ್‌ರಾಜ್ ಕಾಂಚನ್, ಅಜಿತ್ ಸುವರ್ಣ, ಸಂತೋಷ್ ಪುತ್ರನ್, ಉದಯ್ ಕುರ್ಮಾ ಹಟ್ಟಿಯಂಗಡಿ, ವೇದಪ್ರಕಾಶ್ ಶ್ರಿಯಾನ್, ಕವಿತಾ ಶರತ್, ನಾಗರಾಜ್ ಸುವರ್ಣ ಮನೋಜ್ ಸಾಲ್ಯಾನ್ ಉಳ್ಳಾಲ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *