×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪುವಿನ ಅಮ್ಮನ ಸನ್ನಿಧಾನದಲ್ಲಿ ಶರನ್ನವರಾತ್ರಿ ಮಹೋತ್ಸವಕ್ಕೆ ವಿಜೃಂಭಣೆಯ ಚಾಲನೆ

ಕಾಪು, ಅ. 11: ಕಾಪು ಮಾರಿಯಮ್ಮನ ಸನ್ನಿದಾನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ದೇವಳದ ಪ್ರಧಾನ ತಂತ್ರಿ ವಿದ್ವಾನ್ ಕೆ.ಪಿ ಕುಮಾರಗುರು ತಂತ್ರಿ ಕೊರಂಗ್ರಪಾಡಿ ಮತ್ತು ವೇದಮೂರ್ತಿ ಶ್ರೀನಿವಾಸ್ ತಂತ್ರಿ ಕಲ್ಯ ಅವರು ಉಚ್ಚಂಗಿ ಸಹಿತ ಮಾರಿಯಮ್ಮನಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿ, ನಂತರ ಶರನ್ನವರಾತ್ರಿ ಮಹೋತ್ಸವದ ಉದ್ಘಾಟನೆ ಮತ್ತು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಎಮ್ ಮೋಹನ್ ಆಳ್ವ ದೀಪ ಬೆಳಗಿಸುವ ಮೂಲಕ ನೆರೆವೇರಿಸಿದರು.

ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಪ್ರತೀಕ್ ಬಾಯಲ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಆರ್ಗ್ಯಾನಿಕ್ ಇಂಡಸ್ಟ್ರೀಸ್ ಪ್ರೈ.ಲಿ. ಮುಂಬೈ ಆಡಳಿತ ನಿರ್ದೇಶಕ ಆನಂದ್ ಎಂ ಶೆಟ್ಟಿ ತೋನ್ಸೆ, ವಿಕೆ ಗ್ರೂಪ್ ಆಫ್ ಕಂಪನೀಸ್ ಪ್ರೈ. ಲಿ. ಮುಂಬೈ ಆಡಳಿತ ನಿರ್ದೇಶಕ ಕೆ. ಎಂ ಶೆಟ್ಟಿ, ಮಾಹೆ ಮಣಿಪಾಲ ಉಪಕುಲಪತಿ ಡಾ. ಎಚ್ ಎಸ್ ಬಳ್ಳಾಲ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ನವದುರ್ಗಾ ಲೇಖನ ಯಜ್ಞ ಸಮಿತಿ ಅಧ್ಯಕ್ಷ ಡಾ ದೇವಿಪ್ರಸಾದ್ ಶೆಟ್ಟಿ ಬೆಳಪು, ಗೌರವ ಸಲಹೆಗಾರ ಉದಯ ಕುಮಾ‌ರ್ ಶೆಟ್ಟಿ ಮುನಿಯಾಲ್, ಕೆ. ವಿಶ್ವನಾಥ್, ಕಾಪು ಲಕ್ಷ್ಮಿ ಜನಾರ್ದನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮನೋಹರ ಎಸ್. ಶೆಟ್ಟಿ, ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಮಾಧವ ಆರ್. ಪಾಲನ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಶಲ್ಯ, ಧಾರ್ಮಿಕ ಸಮಿತಿಯ ಪ್ರಧಾನ ಸಂಚಾಲಕ ಕೆ. ಭಗವಾನ್ ದಾಸ್, ನವದುರ್ಗಾ ಲೇಖನ ಯಜ್ಞ ಸಮಿತಿಯ ಕಾರ್ಯಧ್ಯಕ್ಷ ಯೋಗೀಶ್ ವಿ ಶೆಟ್ಟಿ, ಸಾವಿತ್ರಿ ಗಣೇಶ್, ಪ್ರಧಾನ ಕಾರ್ಯದರ್ಶಿ ಗೀತಾಂಜಲಿ ಎಂ ಸುವರ್ಣ, ಕೋಶಾಧಿಕಾರಿ ಸುನಿಲ್ ಎಸ್. ಪೂಜಾರಿ, ವ್ಯವಸ್ಥಾಪನ ಸಮಿತಿ ಸದಸ್ಯ ಶೇಖರ ಸಾಲ್ಯಾನ್, ಮನೋಹ‌ರ್ ರಾವ್, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಎಸ್. ಶೆಟ್ಟಿ, ಚರಿತ ದೇವಾಡಿಗ, ಕೊಡವೂರು ಸಾಯಿಬಾಬಾ ಮಂದಿರ ಟ್ರಸ್ಟಿ ದಿವಾಕರ ಶೆಟ್ಟಿ ಕೊಡವೂರು, ಸುಧಾಕರ ಶೆಟ್ಟಿ ಮಕರ, ಡಾ. ಪ್ರಶಾಂತ್ ಶೆಟ್ಟಿ ಕಾಪು, ಬೀನಾ ವಿ.ಶೆಟ್ಟಿ, ಶಿಲ್ಪಾ ಜಿ. ಸುವರ್ಣ, ಅನುರಾಧ ಮನೋಹರ್ ಶೆಟ್ಟಿ, ಕಾಪು ಜಯರಾಮ ಆಚಾರ್ಯ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *