×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಉಡುಪಿಯಲ್ಲಿ ‘ಅರಸು ಮೋಟರ್ಸ್’ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ಭವ್ಯ ಉದ್ಘಾಟನೆ!

ಉಡುಪಿಯಲ್ಲಿ ಇ-ಬೈಕ್ ಪ್ರಿಯರಿಗಾಗಿ ಹಾಗೂ ಪರಿಸರ ಸ್ನೇಹಿ ಪ್ರಯಾಣ ಬಯಸುವ ಗ್ರಾಹಕರಿಗಾಗಿ ‘ಅರಸು ಮೋಟರ್ಸ್’ ನೂತನ ಎಲೆಕ್ಟ್ರಿಕ್ ದ್ವಿಚಕ್ರ ವಾಹನ

ಉಡುಪಿ ನಗರದ ಸಂತೆಕಟ್ಟೆ (ಹೋಟೆಲ್ ಶಾರದಾಂಬ ಫಿಶ್‌ಲ್ಯಾಂಡ್ ಸಮೀಪ) ಈ ನೂತನ ಶೋರೂಂ ಕಾರ್ಯಾರಂಭ ಮಾಡಿದ್ದು, ಪ್ರಮುಖ ಗಣ್ಯರ ಉಪಸ್ಥಿತಿಯಲ್ಲಿ ಭವ್ಯವಾಗಿ ಉದ್ಘಾಟನೆಗೊಂಡಿತು.”ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಶೋರೂಂ ಉದ್ಘಾಟಿಸಿ ಶುಭ ಹಾರೈಸಿದರು.

ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸ್ಥಳೀಯವಾಗಿ ಉದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಇಂತಹ ಪ್ರಯತ್ನಗಳು ಗ್ರಾಹಕರಿಗೆ ಹೊಸ ಆಯ್ಕೆಗಳನ್ನು ಒದಗಿಸುವುದರ ಜೊತೆಗೆ ಉದ್ಯಮ ಕ್ಷೇತ್ರದ ಬೆಳವಣಿಗೆಗೂ ಸಹಕಾರಿಯಾಗಲಿವೆ ಎಂದು ನೂತನ ಸಂಸ್ಥೆಗೆ ಶುಭ ಹಾರೈಸಿದರು.

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಚಲನಚಿತ್ರ ನಟ ಅರವಿಂದ್ ಬೋಳಾರ್ ಹಾಗೂ ಸಮಾಜಸೇವಕ ಡಾ. ಅಂಬರೀಶ್ ಮಾತನಾಡಿ, ನೂತನ ಉದ್ಯಮದ ಬೆಳವಣಿಗೆಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಪ್ರಸನ್ನ ಶೆಟ್ಟಿ ಬೈಲೂರು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಜನಾರ್ದನ ತೋನ್ಸೆ, ಮಾಜಿ ಕೌನ್ಸಿಲರ್ ಜಯಾನಂದ್, ಉದ್ಯಮಿ ಉದಯಕುಮಾರ್ ಶೆಟ್ಟಿ, ಸಂತೋಷ್ ಕುಮಾರ್, ಅಲ್ತಾಫ್ ಕುಲಾಯಿ ಹಾಗೂ ಸುನಿಲ್ ಕಪ್ಪೆಟ್ಟು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್‌ನ ಅರ್ಜುನ್ ಭಂಡಾರ್ಕರ್ ಹಾಗೂ ಮಿಸ್ ಯೂನಿವರ್ಸ್ 2026 ಸ್ಪೂರ್ತಿ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಿಶೋರ್ ಸಲ್ಯಾನ್, ಮನೋಜ್ ಕುಮಾರ್, ಗಣೇಶ್ ಸುವರ್ಣ ಹಾಗೂ ದಿನೇಶ್ ಶೆಟ್ಟಿ ಅವರ ಪಾಲುದಾರಿಕೆಯಲ್ಲಿ ಅರಸು ಮೋಟರ್ಸ್ ಆರಂಭಗೊಂಡಿದೆ. ಅಖಿಲೇಶ್ ಕೋಟ್ಯಾನ್ ರಮೇಶ್ ಕಾಂಚನ್ ಮುಂತಾದವರು ಉಪಸ್ಥಿತರಿದ್ದರು ಗ್ರಾಹಕರಿಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಆಯ್ಕೆ ಹಾಗೂ ಸೇವೆ ಒದಗಿಸುವ ಉದ್ದೇಶದಿಂದ ಸಂತೆಕಟ್ಟೆಯಲ್ಲಿ ಶೋರೂಂ ಕಾರ್ಯಾರಂಭ ಮಾಡಿದೆ.

ಅರ್ಪಿತ ಪ್ರಶಾಂತ್ ಶೆಟ್ಟಿ ಕಟಪಾಡಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಲ್ಲಿಸಿದರು.

Leave a Reply

Your email address will not be published. Required fields are marked *