×
Our website is made possible by displaying online advertisements to our visitors. Please consider supporting us by whitelisting our website.
  • 9880645340

ನ. 14ರಿಂದ ಉಡುಪಿ ಜಿಲ್ಲೆಯಾದ್ಯಂತ 73ನೇ ಅಖಿಲ ಭಾರತ ಸಹಕಾರ ಸಪ್ತಾಹ; 7 ಕಡೆ ವಿಶೇಷ ಕಾರ್ಯಕ್ರಮ, 20ರಂದು ಮಂಗಳೂರಿನಲ್ಲಿ ಸಮಾರೋಪ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಸಹಕಾರ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಸಹಕಾರ ಸಂಸ್ಥೆಗಳ ಸಹಯೋಗದೊಂದಿಗೆ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಉಡುಪಿ ಜಿಲ್ಲೆಯ ವಿವಿದೆಡೆಗಳಲ್ಲಿ ನ. 14ರಿಂದ 20ರವರೆಗೆ ನಡೆಯಲಿದೆ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ ತಿಳಿಸಿದ್ದಾರೆ.

ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸಹಕಾರ ಸಂಸ್ಥೆಗಳ ಬಲಪಡೆ ಯುವಿಕೆಯಲ್ಲಿ ಉತ್ತಮ ಪರಿಸರ, ತಂತ್ರಜ್ಞಾನ, ಕೌಶಲ್ಯಾಧಾರಿತ ಉತ್ಪಾದನೆ ಸೇವೆ’ ಎಂಬ ಧೈಯ ವಾಕ್ಯ ದೊಂದಿಗೆ ಈ ಬಾರಿಯ ಸಹಕಾರ ಸಪ್ತಾಹ ದೇಶಾದ್ಯಂತ ನಡೆಯಲಿದೆ ಎಂದರು.

ನ.14ರಂದು ಕಲ್ಯಾಣಪುರ ಸಂತೆಕಟ್ಟೆಯ ಬೃಂದಾವನ ಹೋಟೆಲ್ ರೂಫ್ ಟಾಪ್ ಹಾಲ್‌ನಲ್ಲಿ ಸಪ್ತಾಹದ ಉದ್ಘಾಟನಾ ಸಮಾರಂಭ ನಡೆಯಲಿದೆ. ಸಹಕಾರ ರತ್ನ ಪುರಸ್ಕೃತ ಜಯಕರ ಶೆಟ್ಟಿ ಇಂದ್ರಾಳಿ ಸಪ್ತಾಹವನ್ನು ಉದ್ಘಾಟಿಸಲಿದ್ದು, ಕರಾವಳಿ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಯಶ್ವಾಲ್ ಸುವರ್ಣ, ಸಹಕಾರ ಇಲಾಖೆ ಉಪನಿಬಂಧಕಿ ಲಾವಣ್ಯ, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆ ಉಪನಿರ್ದೆಶಕ ಎಂ. ಎಂ. ಆನಂದ ಭಾಗವಹಿಸಲಿ ದ್ದಾರೆ ಎಂದರು.

ನ. 15ರಂದು ಕೋಟೇಶ್ವರದ ಶಾರದ ಕಲ್ಯಾಣ ಮಂಟಪದಲ್ಲಿ ಗಣೀಕರಣ, ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟೈಸೇಫಿನ್ ಪ್ರಕ್ರಿಯೆಗಳು, ಸಹಕಾರ ಸಂಘಗಳ ಬೆಳವಣಿಗೆಗೆ ಪೋಷಕ ಮತ್ತು ಕೃಷಿ ಪತ್ತಿನ ಸಹಕಾರ ಸಂಘದ ನಿವೃತ್ತ ನೌಕರಿಗೆ ಸನ್ಮಾನ ಕಾರ್ಯಕ್ರಮ ಜರಗಲಿದೆ. ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ. ಮಹೇಶ್ ಹೆಗ್ಡೆ ಮೊಳಹಳ್ಳಿ ಉದ್ಘಾಟಿಸಲಿದ್ದಾರೆ.

ನ.16 ರಂದು ಕೋಟ ಬಿ.ಸಿ ಹೊಳ್ಳ ಸಹಕಾರ ಸಭಾಭವನದಲ್ಲಿ ಕಾರ್ಯಕ್ರಮ ನಡೆಯಲಿದೆ. ನ.17ರಂದು ಬಜಗೋಳಿ ಗಣಪತಿ ಸಭಾಭವನ ದಲ್ಲಿ ಕಾರ್ಯಾಗಾರವನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ. ಕಾರ್ಕಳ ಶಾಸಕ ಸುನಿಲ್‌ಕುಮಾರ್ ಉಪಸ್ಥಿತರಿರುವರು ಎಂದರು.

ನ.18ರಂದು ಬೆಳಗ್ಗೆ 9:30ಕ್ಕೆ ಪಡುಬಿದ್ರಿ ಸಹಕಾರಿ ಸೊಸೈಟಿ ಸಭಾಂಗಣದಲ್ಲಿ ಕಾರ್ಯಾಗಾರ ನಡೆಯಲಿದ್ದು, ಕೊಪ್ಪದ ವಕೀಲ ಸುಧೀರ್ ಕುಮಾರ್ ಮರೋಳಿ ಉದ್ಘಾಟಿಸಲಿದ್ದಾರೆ. ಅಪರಾಹ್ನ 3 ಗಂಟೆಗೆ ನಾಗೂರು ಶ್ರೀಕೃಷ್ಣ ಲಲಿತ ಕಲಾಮಂದಿರದ ಖಂಬದಕೋಣಿ ರೈತ ಸೇವಾ ಸಹಕಾರ ಸಂಘದ ಆಶ್ರಯದಲ್ಲಿ ನಡೆಯಲಿದೆ.

ನ.19ರಂದು ಅಪರಾಹ್ನ 2:30ಕ್ಕೆ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಕಾರ್ಯಕ್ರಮವನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ ಉದ್ಘಾಟಿಸಲಿದ್ದಾರೆ. ಈ ಬಾರಿಯ ರಾಜ್ಯಮಟ್ಟದ ಸಹಕಾರ ಸಪ್ತಾಹ ಹಾಗೂ ಸಮಾರೋಪ ಸಮಾರಂಭ ನ.20ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ ನಡೆಯಲಿದೆ ಎಂದು ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಹಕಾರ ಯೂನಿಯನ್‌ನ ನಿರ್ದೇಶಕ ಸುಧೀರ್ ಕುಮಾರ್, ಸಿಇಒ ಅನುಷಾ ಕೋಟ್ಯಾನ್, ನಿರ್ದೇಶಕ ಶ್ರೀಧರ ಪಿ.ಎಸ್. ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *