×
Our website is made possible by displaying online advertisements to our visitors. Please consider supporting us by whitelisting our website.
  • 9880645340

ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ನೇಮಕಗೊಂಡ ಮಂಜುನಾಥ ಭಂಡಾರಿ ಅವರಿಗೆ ಉದಯ ಶೆಟ್ಟಿ ಮುನಿಯಾಲು ಅಭಿನಂದನೆ

ಕರ್ನಾಟಕ ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ನೇಮಕರಾದ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಪಕ್ಷದ ಬಲವರ್ಧನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಮಂಜುನಾಥ ಭಂಡಾರಿ ಅವರಿಗೆ ಈ ಮಹತ್ವದ ಜವಾಬ್ದಾರಿ ನೀಡಿರುವುದು ಅವರ ಪಕ್ಷನಿಷ್ಠೆ, ಸಂಘಟನಾ ಸಾಮರ್ಥ್ಯ ಹಾಗೂ ಅನುಭವಕ್ಕೆ ಸಂದ ಗೌರವವಾಗಿದೆ. ಶಿಕ್ಷಣ ತಜ್ಙರು, ಚಿಂತಕರೂ ಆಗಿರುವ ಮಂಜುನಾಥ ಭಂಡಾರಿಯವರು ವಿಧಾನಪರಿಷತ್ ಮುಖ್ಯ ಸಚೇತಕರಾಗಿರುವುದು ಅತ್ಯಂತ ಸಂತಸದ ವಿಚಾರವಾಗಿದೆ.

ನೂತನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ, ರಾಜ್ಯದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಇನ್ನಷ್ಟು ಉತ್ತಮ ಸೇವೆ ಸಲ್ಲಿಸಲಿ ಎಂದು ಹಾರೈಸುತ್ತೇನೆ ಎಂದು ಉದಯ ಶೆಟ್ಟಿ ಮುನಿಯಾಲು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *