×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ- ಚಾಲಕ ಪ್ರಾಣಾಪಾಯದಿಂದ ಪಾರು

ಚಾಲಕನ ನಿಯಂತ್ರಣ ತಪ್ಪಿ ಟೆಂಪೊವೊಂದು ಪಲ್ಟಿಯಾದ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಣ್ ಪಿಲರ್‌ಖಾನದ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಬೆಳಣ್ ಕಡೆಯಿಂದ ಕೆಂಪು ಕಲ್ಲನ್ನು ತುಂಬಿಸಿಕೊಂಡು ಶಿರ್ವ ಕಡೆ ಸಾಗುತ್ತಿದ್ದ  ಟೆಂಪೋ ವಾಹನ ಪಿಲ‌ಖಾನ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆಗೆ ಅಡ್ಡಲಾಗಿ ಬಿದ್ದು ವಾಹನ ನುಜ್ಜುಗುಜ್ಜಾಗಿದೆ. ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿರ್ವ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಜೆಸಿಬಿ ಮುಖಾಂತರ ಟೆಂಪೋವನ್ನು ತೆರವುಗೊಳಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Leave a Reply

Your email address will not be published. Required fields are marked *