×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಸುಪ್ರೀಂಕೋರ್ಟ್​ನಿಂದ ಹಿಜಾಬ್ ಕುರಿತು ವಿಭಜಿತ ತೀರ್ಪು, ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ಪ್ರಕರಣ

ದೆಹಲಿ: ಇಡೀ ವಿಶ್ವ ಕಾತರದಿಂದ ಎದುರು ನೋಡುತ್ತಿದ್ದ ಹಿಜಾಬ್ ವಿವಾದ (Hijab Controversy) ಕುರಿತು ಸುಪ್ರೀಂಕೋರ್ಟ್ (Supreme Court of India) ಗುರುವಾರ (ಅ 13) ಐತಿಹಾಸಿಕ ತೀರ್ಪು ನೀಡಿತು. ಹಿಜಾಬ್​ನ ಪರ ಹಾಗೂ ವಿರುದ್ಧ ವಾದ ಮಂಡಿಸಿದ್ದ ಬಹುತೇಕ ವಕೀಲರು ಈ ವೇಳೆ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಸುಧಾಂಶು ಧುಲಿಯಾ ವಿಭಜಿತ ತೀರ್ಪು ನೀಡಿದ್ದಾರೆ. ಪ್ರಸ್ತುತ ನ್ಯಾಯಮೂರ್ತಿ ಹೇಮಂತ್ ಗುಪ್ತ ತೀರ್ಪು ಓದುತ್ತಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ಅವರು ವಜಾ ಮಾಡಿದ್ದಾರೆ. ಆದರೆ ನ್ಯಾಯಮೂರ್ತಿ ಸುಧಾಂಶು ಅವರು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದ್ದಾರೆ. ಒಬ್ಬ ನ್ಯಾಯಮೂರ್ತಿ ಹಿಜಾಬ್ ಪರವಾಗಿ ತೀರ್ಪು ನೀಡಿದ್ದರೆ, ಮತ್ತೊಬ್ಬರು ಹಿಜಾಬ್ ವಿರುದ್ಧ ತೀರ್ಪು ನೀಡಿದ್ದಾರೆ. ಇಬ್ಬರು ವಿಭಿನ್ನ ತೀರ್ಪು ನೀಡಿರುವುದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ (Chief Justice Bench) ವರ್ಗಾವಣೆ ಮಾಡಲಾಗಿದೆ. ಪ್ರಕರಣದ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮುಂದಿನ ದಿನಗಳಲ್ಲಿ ವಿಸ್ತೃತ ನ್ಯಾಯಪೀಠ (Larger Bench) ರಚಿಸುವ ಸಾಧ್ಯತೆಯಿದೆ. ಪ್ರಕರಣವನ್ನು ಮತ್ತೊಮ್ಮೆ ಆಮೂಲಾಗ್ರ ಪರಿಶೀಲಿಸಿದ ನಂತರ ವಿಸ್ತೃತ ನ್ಯಾಯಪೀಠವು ತನ್ನ ತೀರ್ಪು ನೀಡಲಿದೆ. ವಿಸ್ತೃತ ನ್ಯಾಯಪೀಠ ರಚಿಸುವುದು ಮತ್ತು ವಿಚಾರಣೆಯ ಸ್ವರೂಪ ನಿರ್ಧರಿಸುವುದು ಮುಖ್ಯ ನ್ಯಾಯಮೂರ್ತಿಯ ವಿವೇಚನೆಗೆ ಬಿಟ್ಟ ಅಧಿಕಾರವಾಗಿರುತ್ತದೆ.

Leave a Reply

Your email address will not be published. Required fields are marked *