×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬಿರುವೆರ್ ಕಾಪು ಸೇವಾ ಸಮಿತಿ : ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸಮ್ಮಾನ

ಕಾಪು, ನ. ೨೧ : ಬಿರುವೆರ್ ಕಾಪು ಸೇವಾ ಸಮಿತಿಯ ವತಿಯಿಂದ ಕಾಪು ಬಿಲ್ಲವರ ಸಹಾಯಕ ಸಂಘದ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಜ್ಞಾನ ದೀವಿಗೆ  ಮೂರನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸಾಧಕರಿಗೆ ಸಮ್ಮಾನ ಕಾರ್ಯಕ್ರಮವನ್ನು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷ ಪ್ರಭಾಕರ ಪೂಜಾರಿ ಅವರು ನ. ೨೦ರಂದು ಉದ್ಘಾಟಿಸಿದರು. ದಿಕ್ಸೂಚಿ ಭಾಷಣಕಾರರಾಗಿ ಭಾಗವಹಿಸಿದ್ದ ನ್ಯಾಯವಾದಿ ಗಿರೀಶ್ ಎಸ್.ಪಿ. ಮಾತನಾಡಿ, ಯುವ ಜನರ ಅಭ್ಯುದಯದಲ್ಲಿ ಸಮಾಜ ಮತ್ತು ಸಂಘಟನೆಗಳ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿ ಜೀವನದಲ್ಲಿ ವಿವಿಧ ಮೂಲಗಳಿಂದ ನೆರವು ಪಡೆಯುವ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ದಿನಗಳಲ್ಲಿ ತಾವೂ ಒಂದಿಷ್ಟು ಜನರಿಗೆ ನೆರವಾಗುವ ಮೂಲಕ ಸಮಾಜದ ಋಣವನ್ನು ತೀರಿಸಿಕೊಳ್ಳಲು ಪ್ರಯತ್ನಿಸಬೇಕಿದೆ ಎಂದರು.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಿತಿಯ ಕಾನೂನು ಸಲಹೆಗಾರ, ನೋಟಿ ಮತ್ತು ವಕೀಲ ಸಂಕಪ್ಪ ಅಮೀನ್ ಮಾತನಾಡಿ, ಬಿರುವೆರ್ ಕಾಪು ಸೇವಾ ಸಮಿತಿಯು ನಡೆಸಿಕೊಂಡು ಬರುತ್ತಿರುವ ಸಾಂತ್ವನ ಯೋಜನೆಯ ಕಾರ್ಯಕ್ರಮಗಳ ಎಲ್ಲರ ಕಣ್ಣು ತೆರೆಸುವ ಕಾರ್ಯಕ್ರಮವಾಗಿದೆ. ಇಂತಹ ಸೇವೆ, ಸಾಧನೆ ಮತ್ತು ಕಾರ್ಯಕ್ರಮ ನಿರಂತರವಾಗಿ ಮುಂದುವರಿಯಲಿ ಎಂದು ಹಾರೈಸಿದರು. ಮಾಜಿ ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ, ಓಮನ್ ಬಿಲ್ಲವಾಸ್‌ನ ಉಪಾಧ್ಯಕ್ಷ ಸುಜಿತ್ ಅಂಚನ್ ಪಾಂಗಾಳ ಮಸ್ಕತ್, ಯುವವಾಹಿನಿ ಕಾಪು ಘಟಕದ ಅಧ್ಯಕ್ಷ ಸಚಿನ್ ಉಚ್ಚಿಲ, ಉದ್ಯಮಿ ದೀಪಕ್ ಕುಮಾರ್ ಎರ್ಮಾಳು ಉಪಸ್ಥಿತರಿದ್ದರು. ವಿದ್ಯಾರ್ಥಿ ವೇತನ ವಿತರಣೆ, ಸಮ್ಮಾನ : ಆರ್ಥಿಕವಾಗಿ ಹಿಂದುಳಿದಿರುವ ಸಮಾದ ಪ್ರತಿಭಾವಂತ ೩೩ ಮಂದಿ ವಿದ್ಯಾರ್ಥಿಗಳಿಗೆ ಸುಮಾರು ೧ ಲಕ್ಷ ರೂ. ವರೆಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಶೈಕ್ಷಣಿಕ ಸಾಧಕ ವಿದ್ಯಾರ್ಥಿಗಳಾದ ಸ್ನೇಹಾ ಜೆ. ಪಡುಬಿದ್ರಿ, ದೀಪಾಲಿ ಪಿ. ಕೋಟ್ಯಾನ್, ಕ್ರೀಡಾ ಸಾಧಕರಾದ ಹರ್ಷಿತಾ ವಿ. ಪೂಜಾರಿ, ಶಮಿತಾ ಪೂಜಾರಿ ಶಿರ್ವ ಅವರನ್ನು ಸಮ್ಮಾನಿಸಲಾಯಿತು. ಸಂಘಟನಾ ಕಾರ್ಯದರ್ಶಿ ಅನಿಲ್ ಅಮೀನ್ ದಂಪತಿಯನ್ನು ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಿರುವೆರ್ ಕಾಪು ಸೇವಾ ಸಮಿತಿಯ ಉಪಾಧ್ಯಕ್ಷ ಸುಧಾಕರ್ ಸಾಲ್ಯಾನ್ ಸ್ವಾಗತಿಸಿದರು. ಕಾರ್ಯಕಾರಿ ಸಮಿತಿ ಸದಸ್ಯ ರಾಕೇಶ್ ಕೆ. ಪ್ರಸ್ತಾವನೆಗೈದರು. ಅಶ್ವಿನಿ ನವೀನ್, ಮನೋಹರ್ ಕಲ್ಲುಗುಡ್ಡೆ ಸಮ್ಮಾನಿತರನ್ನು ಪರಿಚಯಿಸಿದರು. ಕಾರ್ಯದರ್ಶಿ ವಿಕ್ಕಿ ಪೂಜಾರಿ ಮಡುಂಬು ವಂದಿಸಿದರು. ಜೊತೆ ಕಾರ್ಯದರ್ಶಿ ಅತಿಥ್ ಸುವರ್ಣ ಪಾಲಮೆ ಕಾರ್ಯಕ್ರಮ ನಿರೂಪಿಸಿದರು 

video link subscribe

https://youtu.be/igiQ54P_duk

Leave a Reply

Your email address will not be published. Required fields are marked *