ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್‌ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ನಿಧನರಾದರು. ಹನುಮಂತ ನಾಯ್ಕರವರು ತಮ್ಮ ಊರು ಬಾಗಲಕೋಟೆಗೆ ಹೋಗಿದ್ದ ವೇಳೆ ಇಂದು ಮುಂಜಾನೆ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. 2008ರ ಬ್ಯಾಚ್‌ನಲ್ಲಿ ಅವರು ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರ್ಪಡೆಗೊಂಡಿದ್ದು, ಈ ಹಿಂದೆ ಮುಲ್ಕಿ ಸಂಚಾರ ಉತ್ತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು. ತಮ್ಮ ಸರಳ ವ್ಯಕ್ತಿತ್ವ, ಸಮಾಜಮುಖಿ ಕೆಲಸ, ದಕ್ಷ ಕೆಲಸ ಕಾರ್ಯಗಳಿಂದ ಅವರು ಪೊಲೀಸ್ ಇಲಾಖೆಯಲ್ಲಿ ಅಲ್ಪ ಕಾಲದಲ್ಲಿ ಉತ್ತಮ ಹೆಸರು ಗಳಿಸಿದ್ದರು. ಮೂಲತಃ ಅವರು ಬಾಗಲ ಕೋಟೆ ಜಿಲ್ಲೆಯವರಾದರೂ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಉತ್ತಮ ಪೊಲೀಸ್ ಎನ್ನುವ ಹೆಸರು ಗಳಿಸಿದ್ದರು. ಮೃತರು ಪತ್ನಿ ಮಂಜುಳಾ, ಮಕ್ಕಳಾದ ಕೃತ್ತಿಕಾ, ಲಾವಣ್ಯ, ಕೃಪಾ ಮತ್ತು ಕುಶಾಲ್ ಅವರನ್ನು ಅಗಲಿದ್ದಾರೆ.
ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ ಗಿರಿಜಾ ದೋಣಿಯು ಸೋಮವಾರ ಬೆಳಗ್ಗೆ ಸಮುದ್ರದಲ್ಲಿ ಮುಳುಗಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಘಟಿಸಿದೆ.ಸೋಮವಾರ ಬೆಳಗಿನ ಜಾವ ಐದು […]
ಉಚ್ಚಿಲ: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ ಇಲ್ಲಿ ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ ಅವರಿಂದ “ಪ್ರೊಡಕ್ಷನ್ ನಂ.7” ಚಲನಚಿತ್ರ ಮುಹೂರ್ತ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ […]
ಉಡುಪಿ: ಭಾರತೀಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ) ನವೆಂಬರ್ ತಿಂಗಳಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಎಂ . ಸಮೀರ ಆಚಾರ್ಯ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ. ಅವರು ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಚಿಟ್ಪಾಡಿ […]
ಪಡುಬಿದ್ರಿ : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ, ಉಡುಪಿ. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ) ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಸಂಯುಕ್ತ […]