ಉಚ್ಚಿಲ : ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದ ಪ್ರಾಂಗಣದಲ್ಲಿ ಮೊಗವೀರ ಮಹಾಜನ ಸಂಘದ ಆಯೋಜನೆಯಲ್ಲಿ ನಡೆಯಲಿರುವ ಉಚ್ಚಿಲ ದಸರ -2023 ರ ಆಮಂತ್ರಣ ಪತ್ರಿಕೆಯನ್ನು ದೇವಳದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ ಶಂಕರ್ ಬಿಡುಗಡೆಗೊಳಿಸಿದರು. ಆಮಂತ್ರಣ ಪತ್ರಿಕೆಗೆ ದೇವಳದ ಪ್ರಧಾನ ಅರ್ಚಕ ಕೆ.ವಿ.ವೇದ ಮೂರ್ತಿ ರಾಘವೇಂದ್ರ ಉಪಾಧ್ಯಾಯರು ಪೂಜೆ ಸಲ್ಲಿಸಿ ಪ್ರಾರ್ಥನೆಗೈದರು. ಆಮಂತ್ರಣ ಪತ್ರ ಬಿಡುಗಡೆಗೊಳಿಸಿದ ನಾಡೋಜ ಡಾ. ಜಿ.ಶಂಕರ್ ಮಾತನಾಡಿ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದಲ್ಲಿ ಉಚ್ಚಿಲ ದಸರಾವು ಅಕ್ಟೋಬರ್ 15 ರಂದು ನವದುರ್ಗೆಯರು ಮತ್ತು ಶ್ರೀ ಶಾರದಾ ಪ್ರತಿಷ್ಠಾಪನೆಯೊಂದಿಗೆ ಮೊದಲ್ಗೊಂಡು 24ರವರೆಗೆ ದಸರಾ ವೈಭವ ನಡೆಯಲಿದೆ. ಈ ಬಾರಿಯ ಉಚ್ಚಿಲ ದಸರಾದಲ್ಲಿ ಯುವ ದಸರಾ, ರಂಗಗೀತೆಗಳು, ಜಾನಪದ ಗೀತೆಗಳು, ಯುವ ಸಂಗೀತೋತ್ಸವ, ಯುವ ನೃತ್ಯೋತ್ಸವ – ನೃತ್ಯ ಸ್ಪರ್ಧೆ, ಸಾವಿರ ಸುಮಂಗಲೆಯರಿಂದ ಸಾಮೂಹಿಕ ಕುಂಕುಮಾರ್ಚನೆ, ಪ್ರತಿದಿನ ವಿವಿಧ ಮನೋರಂಜನಾ ಕಾರ್ಯಕ್ರಮಗಳು, ಪ್ರತಿದಿನ ಅಪರಾಹ್ನ ಅನ್ನಸಂತರ್ಪಣೆ, ಅಕ್ಟೋಬರ್ 24ರಂದು ಅಪರಾಹ್ನ 3 ಗಂಟೆಗೆ ಶೋಭಾಯಾತ್ರೆ, ಕಾಪು ಬೀಚ್ ದೀಪಸ್ತಂಭದ ಬಳಿ ಗಂಗಾರತಿ, ಜಲಸ್ತಂಭನ ನಡೆಯಲಿದೆ ಎಂದರು. ಈ ಸಂದರ್ಭ ಮೋಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಜೀಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಬಿ ಅಮೀನ್, ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ
ವಾಸುದೇವ ಸಾಲ್ಯಾನ್, ಉದ್ಯಮಿ ಭುವನೇಂದ್ರ ಕಿದಿಯೂರು, ಮಹಿಳಾ ಘಟಕಾಧ್ಯಕ್ಷೆ ಉಷಾ ರಾಣಿ, ದೇವಳದ ಪ್ರಬಂಧಕ ಸತೀಶ್ ಅಮೀನ್ ಪಡುಕೆರೆ ಉಪಸ್ಥಿತರಿದ್ದರು.

