×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಬೆಳ್ತಂಗಡಿ: ಇಲ್ಲಿನ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಭೇಟಿ ನೀಡಿದರು. ಬೆಳ್ತಂಗಡಿ ಜುಮಾ ಮಸೀದಿ ಖತೀಬ್ ಹನೀಫ್ ಫೈಝಿ ಪ್ರಾರ್ಥನೆ ನೆರವೇರಿಸಿದರು. ಇದೇ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಗ್ರಾಮೀಣ ಅಧ್ಯಕ್ಷ ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಂದನಾ ಭಂಡಾರಿ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಪೀತಾಂಬರ ಹೇರಾಜೆ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಕೊಕ್ಕಡ, ಬೆಳ್ತಂಗಡಿ ಚುನಾವಣಾ ಉಸ್ತುವಾರಿಗಳಾದ ಧರ್ಣೇಂದ್ರ ಕುಮಾರ್, ರಜತ್ ಗೌಡ, ಸುಭಾಶ್ ರೈ, ಮಾಲಾಡಿ ಗ್ರಾಪಂ ಅಧ್ಯಕ್ಷ ಪುನೀತ್ ಕುಮಾರ್ ಮಾಲಾಡಿ, ವೇಣೂರು ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಎಚ್. ಕೋಟ್ಯಾನ್, ಶೇಖರ್ ಕುಕ್ಯಾಡಿ, ಮನೋಹರ್ ಇಳಂತಿಲ, ಪದ್ಮನಾಭ ಸಾಲ್ಯಾನ್ ಮಾಲಾಡಿ ಸೇರಿದಂತೆ ನಾಯಕರು ಕಾರ್ಯಕರ್ತರು, ದಾರುಸ್ಸಲಾಂ ದುಅ್’ವಾ ಕಾಲೇಜು ಮ್ಯಾನೇಜರ್ ಸಿರಾಜ್, ಶಿಕ್ಷಕರಾದ ನಾಸೀರ್ ಅನ್ಸಾರಿ, ಶಾಫಿ ಫೈಝಿ ಉಪಸ್ಥಿತರಿದ್ದರು. ಸಂಸ್ಥೆಯ ಕೋಶಾಧಿಕಾರಿ ರಝಾಕ್ ಡಿ.ಡಿ. ಸ್ವಾಗತಿಸಿ, ವಂದಿಸಿದರು.

Leave a Reply

Your email address will not be published. Required fields are marked *