ಬೆಂಗಳೂರು ಅಂತಾರಾಷ್ಟ್ರೀಯ ವನ್ಯಜೀವಿ ಛಾಯಾಗ್ರಾಹಕ ಕೆ.ಎನ್.ಮೋಹನ್ ಕುಮಾರ್ (56) ಸೋಮವಾರ ಹೃದಯಾಘಾತದಿಂದ ನಿಧನರಾದರು.ಮೋಹನ್ ಕುಮಾರ್ ಅವರು ದೂರದರ್ಶನ ಚಂದನ ವಾಹಿನಿಯಲ್ಲಿ ಪ್ರಸಾರವಾದ ‘ಜಾನಪದ’ ಕಾರ್ಯಕ್ರಮದ ನಿರೂಪಕರಾಗಿ ಕಿರುತೆರೆ ಪ್ರವೇಶಿಸಿ ಜನಪ್ರಿಯತೆ ಗಳಿಸಿದ್ದರು.ಎಂಜಿನಿಯರ್ ಆದ ಇವರು ರಂಗಭೂಮಿ, ಧಾರಾವಾಹಿ, ಪತ್ರಿಕೋದ್ಯಮ, ಪ್ರಕಾಶನ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮ ಛಾಪು ಮೂಡಿಸಿದರು. ಮೈಸೂರು ಮಲ್ಲಿಗೆ’ ಸಿನಿಮಾದ ನಾಯಕನಿಗೆ ಕಂಠದಾನ ಮಾಡಿದ್ದರುಪತ್ನಿ ವತ್ಸಲಾ ಮೋಹನ್ ಅವರ ‘ಸಜ್ಜಾದನಾ ಗಣೇಶ’ ಕಾದಂಬರಿ ಆಧರಿಸಿ 2016ರಲ್ಲಿ ‘ಬೊಂಬೆಯಾಟ’ ಮಕ್ಕಳ ಸಿನಿಮಾವನ್ನು ನಿರ್ದೇಶಿಸಿದರು. ರಷ್ಯಾದ ಮಾಸ್ಕೋದಲ್ಲಿ ನಡೆದ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾದ ಏಕೈಕ ಭಾರತೀಯ ಸಿನಿಮಾ ‘ಬೊಂಬೆಯಾಟ ಎಂಬುದು ಇದರ ಹೆಗ್ಗಳಿಕೆ.


