ಕಾಪು : ಕಾಪು ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ವಿಕ್ರಂ ಕಾಪು, ಸದಸ್ಯರಾದ ಹರೀಶ್ ನಾಯಕ್ ಕಾಪು, ಮಹಮದ್ ಸಾಧಿಕ್, ಲಕ್ಷ್ಮೀಶ ತಂತ್ರಿ ಕಲ್ಯ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ , ಅವರು ಕಾಪು ದಿವಾಕರ ಶೆಟ್ಟಿ ಪ್ರಾಧಿಕಾರದ ಪ್ರಥಮ ಅಧ್ಯಕ್ಷರಾಗಿದ್ದರು ಕಾಪು ಪುರಸಭೆ ಮತ್ತು ಸುತ್ತಮುತ್ತಲಿನ ಜನರಿಗೆ ಮೂಲಸೌಕರ್ಯಗಳ ಜೋಡಣೆ ಮತ್ತು ಅಭಿವೃದ್ಧಿಯ ಉದ್ದೇಶದೊಂದಿಗೆ ಪ್ರಾಧಿಕಾರವನ್ನು ರಚಿಸಲಾಗಿತ್ತು. ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು ಹತ್ತು ವರ್ಷ ಕಳೆದರೂ ಈವರೆಗೂ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ಸಾಧ್ಯವಾಗಲ್ಲಿಲ. ನೂತನ ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯದರ್ಶಿ ಜತೆಗೂಡಿ ಜನರ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವಂತೆ ಸಲಹೆ ನೀಡಿದರು ಅಧ್ಯಕ್ಷ ವಿಕ್ರಂ ಕಾಪು ಮಾತನಾಡಿ,ಕಾಪು ಪುರಸಭೆ ಮತ್ತು ಸುತ್ತಮುತ್ತಲಿನ ಎಂಟು ಗ್ರಾಮಗಳ ಜನರೊಂದಿಗೆ ನಿಕಟ ಸಂಪರ್ಕ ಇರಿಸಿಕೊಂಡು, ಸದಸ್ಯರು, ಜನಪ್ರತಿನಿಧಿಗಳು ಮತ್ತು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅವರ ಮಾರ್ಗದರ್ಶನದಡಿ ಕಾರ್ಯನಿರ್ವಹಿಸಲು ಬದ್ಧನಿದ್ದೇನೆ ಎಂದರು.ಪ್ರಾಧಿಕಾರದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕೆಪಿಸಿಸಿ ಉಪಾಧ್ಯಕ್ಷ ಎಂ.ಎ. ಗಫೂರ್ ಶುಭಹಾರೈಸಿದರು


