ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇವರ ಆಶ್ರಯದಲ್ಲಿ ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ಅಭಿನಯಿಸುವ ,ಲಯನ್ ಡಿ ಕಿಶೋರ್ ಶೆಟ್ಟಿ ನಿರ್ದೇಶನದ , ಕುಸಾಲ್ಡ್ ಮಾಣಿಕ್ಯ ಅರವಿಂದ ಬೋಳಾರ್ ನಟಿಸಿರುವ ಈ ವರ್ಷದ ಸೂಪರ್ ಹಿಟ್ ತುಳು ನಾಟಕ ಒರಿಯಾಂಡಲ ಸರಿ ಬೋಡು ಎಂಬ ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 6:15 ರಿಂದ ಪ್ರಾರಂಭ ಗೊಳ್ಳುವ ಈ ನಾಟಕಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಮತ್ತು ಎಂದಿಗೂ ಕಲಾವಿದರನ್ನು ಪ್ರೋತ್ಸಾಹಿಸುವ ಉಡುಪಿ ಪರಿಸರದ ಜನತೆ ಈ ನಾಟಕ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವೀ ಮಾಡಿಕೊಡಬೇಕೆಂದು ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇದರ ಸರ್ವ ಪದಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

