ತಾಲೂಕು ಪಂಚಾಯತ್ ಕಟ್ಟದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ , ಭಾರತ ದೇಶದ ಇತಿಹಾಸದಲ್ಲಿ ಇಂಥ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ಹೆಮ್ಮೆ ನಮ್ಮ ಸರ್ಕಾರದ್ದು ಎಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ ಹೇಳಿದರು. ಅವರು ಕಾಪುವಿನಲ್ಲಿ, ಕಾಪು ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಕಚೇರಿ ಉದ್ಘಾಟನೆ, ಅಧಿಕಾರ ಸ್ವೀಕಾರ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ಪಂಚ ಗ್ಯಾರಂಟಿ ಯೋಜನೆಗಳ ಮಹತ್ವವನ್ನು ಅನುಷ್ಠಾನ ಸಮಿತಿಗಳು ಜನರಿಗೆ ಮುಟ್ಟಿಸಲಿ, ರಾಜ್ಯದ ಯೋಜನೆಗಳು ಜನರಿಗೆ ಲುಪುವಂತಾಗಲಿ ಎಂದರು. ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ಫಲಾನುಭವಿಗಳಿಗೆ ತಮಗೆ ದೊರಕುವ ಸವಲತ್ತುಗಳ ಬಗ್ಗೆ ಅರಿವು ಹೊಂದಿರಬೇಕು. ಮುಂದಿನ ದಿನಗಳಲ್ಲಿ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಯ ಸಮ್ಮೇಳನವನ್ನುಆಯೋಜಿಸಿ, ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪದೇ ಇರುವ ಸಾರ್ವಜನಿಕರ ಕುಂದು ಕೊರತೆಗಳನ್ನುಆಲಿಸಿ, ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಉಂಟಾಗುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಕ್ರಮವಹಿಸಲಾಗುವುದು ಎಂದರು.ಕಾಪು ತಾಲೂಕು ಗ್ಯಾರಂಟಿ ಯೋಜನೆಯ ಸಮಿತಿಯ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಜನ ಸೇವೆಯೇ ಜನಾರ್ಧನ ಸೇವೆ ಎಂಬ ನಂಬಿಕೆಯೊಂದಿಗೆ ನಾನು ಕಾರ್ಯನಿರ್ವಹಿಸುತ್ತೇನೆ. ಗ್ಯಾರಂಟಿ ಯೋಜನೆಯ ಪ್ರತಿಶತಃ ನೂರರಷ್ಟು ಅನುಷ್ಠಾನಕ್ಕೆ ಅಧಿಕಾರಿಗಳು ಹಾಗೂ ಜನಸಾಮಾನ್ಯರು ಸ್ಪಂದಿಸಬೇಕು ಎಂದರು. ಯುವನಿಧಿ ಯೋಜನೆಯ ವಿಶೇಷ ನೋಂದಣಿ ಅಭಿಯಾನ ಆರಂಭ ಕುರಿತ ಕರಪತ್ರವನ್ನು ಬಿಡುಗಡೆಗೊಳಿಸಲಾಯಿತು.ಕಾರ್ಯಕ್ರಮದಲ್ಲಿ ಕಾಪು ತಾಲೂಕು ತಹಶೀಲ್ದಾರ್ ಪ್ರತಿಭಾ ಆರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಕ್ರಂ, ಸ್ಥಾಯಿ ಸಮಿತಿಯ ಅಧ್ಯಕ್ಷ ಅನಿಲ್‌ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಅನುರಾಧ ಹಾದಿಮನೆ, ಕಾಪು ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರುಗಳಾದ ಕೀರ್ತಿಕುಮಾರ್, ಸವಿತಾಕುಂದರ್, ರಶ್ಮಿತಾ, ರೋಶನ್‌ಕುಮಾರ್, ಲವ ಕರ್ಕೇರ, ಪ್ರಭಾಕರ ಆಚಾರ್ಯ, ಹಸನಬ್ಬ ಶೇಖ್, ಮಹೇಶ್ ಶೆಟ್ಟಿ, ರಾಜು ಮೂಲ್ಯ, ಸುಧೀರ್ ಕರ್ಕೇರ, ಹಸನ್ ಬಾವ ಹಾಗೂ ಪೂರ್ಣಿಮಾ ಜಿ.ಸಿ, ಮತ್ತಿತರರುಉಪಸ್ಥಿತರಿದ್ದರು. ಕಾಪು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಜೇಮ್ಸ್ ಡಿ ಸಿಲ್ವಾ, ಸ್ವಾಗತಿಸಿದರು. ಪ್ರಶಾಂತ್ ನಿರೂಪಿಸಿದರು.


