×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು : ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಸ್ಕೌಟ್ಸ್ – ಗೈಡ್ಸ್ ದ್ವಿತೀಯ ಸೋಪಾನ ಪರೀಕ್ಷೆ.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಾಪು ಮತ್ತು ಉಡುಪಿ ಸ್ಥಳೀಯ ಸಂಸ್ಥೆಯ ದ್ವಿತೀಯ ಸೋಪಾನ ಪರೀಕ್ಷೆಯು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ದಿನಾಂಕ: 30-೦1-2025 ರಂದು ನಡೆಯಿತು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಕಾಪು ಸ್ಥಳೀಯ ಸಂಸ್ಥೆಯ ಗೌರವಾಧ್ಯಕ್ಷರಾದ ಡಾ|| ಕೆ. ಪ್ರಶಾಂತ್ ಶೆಟ್ಟಿಯವರು ವಹಿಸಿ ವಿದ್ಯಾರ್ಥಿಗಳು ಇಂತಹ ಪರೀಕ್ಷಾ ಶಿಬಿರಗಳಲ್ಲಿ ಭಾಗವಹಿಸುವುದರಿಂದ ಸ್ಕೌಟ್ಸ್-ಗೈಡ್ಸ್ ನ ಉನ್ನತ ಗೌರವ-ಪುರಸ್ಕಾರಗಳನ್ನು ಪಡೆದು ಪ್ರತಿಭಾನ್ವಿತರಾಗಿ ಮೂಡಿ ಬರುತ್ತಾರೆ ಎಂಬ ಸಂದೇಶದೊಂದಿಗೆ ಶುಭ ಹಾರೈಸಿದರು. ಉದ್ಘಾಟಕರಾಗಿ ಪಾಲ್ಗೊಂಡ ಭಾರತ್ ಸ್ಕೌಟ್ಸ್-ಗೈಡ್ಸ್ ಉಡುಪಿ ಜಿಲ್ಲಾ ಆಯುಕ್ತರಾದ ಲಯನ್ ಜಯಕರ ಶೆಟ್ಟಿ ಇಂದ್ರಾಳಿಯವರು ಸನ್ಮಾನವನ್ನು ಸ್ವೀಕರಿಸಿ, ಸ್ಕೌಟ್ ಚಳವಳಿಯು ಒಂದು ನಿರಂತರ ಪ್ರಕ್ರಿಯೆ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಇವುಗಳಲ್ಲಿ ತೊಡಗಿಕೊಂಡಾಗ, ಸಾಮಾಜಿಕ ಜೀವನದಲ್ಲಿ ಪರಿಪೂರ್ಣರಾಗಿ ಮೂಡಿಬರುತ್ತಾರೆ, ದೇಶಭಕ್ತಿಯ ಜೊತೆಗೆ ಸುಂದರ ಭವಿಷ್ಯದ ನಿರ್ಮಾಣಕ್ಕೆ ಕಾರಣರಾಗುತ್ತಾರೆ. ಸ್ಕೌಟ್ ಪರೀಕ್ಷೆಯ ಜೊತೆಗೆ ಮುಂಬರುವ ಶಾಲಾ ಪರೀಕ್ಷೆಗಳಲ್ಲಿಯೂ ತೇರ್ಗಡೆಯಾಗಿ ಪ್ರತಿಭಾನ್ವಿತರಾಗಿ ಮೂಡಿಬನ್ನಿ ಎಂಬ ಸಂದೇಶವನ್ನು ನೀಡಿದರು. ಸಮಾರಂಭದಲ್ಲಿ ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನ ಶೇಖರ್, ದಂಡತೀರ್ಥ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್, ಜಿಲ್ಲಾ ಸಹಾಯಕ ಆಯುಕ್ತ ರಿತೇಶ್ ಶೆಟ್ಟಿ ಸೂಡ, ಉಡುಪಿ ಸ್ಥಳೀಯ ಸಂಸ್ಥೆಯ ಖಜಾಂಚಿ ರಮೇಶ್ ಅಂಬಾಡಿ, ಶಿಬಿರದ ನಾಯಕರಾದ ಉಮೇಶ್ ಕಾಂಚನ್, ದಂಡತೀರ್ಥ ವಿದ್ಯಾಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ್, ಪ್ರಾಥಮಿಕ ವಿಭಾಗದ ಮುಖ್ಯಸ್ಥ ಗೇಬ್ರಿಯಲ್ ಮಸ್ಕರೇನ್ಹಸ್, ಬೇರೆ ಬೇರೆ ವಿದ್ಯಾಸಂಸ್ಥೆಗಳ ಶಿಕ್ಷಕ – ಶಿಕ್ಷಕಿಯರು ಹಾಗೂ ಸುಮಾರು ೫೦೦ ಮಂದಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾಪು ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಮರಿಯ ಅನಿತ ಮೆಂಡೋನ್ಸ ಸ್ವಾಗತಿಸಿದರು. ಉಡುಪಿ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶೇಖರ್ ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್ ಧನ್ಯವಾದ ನೀಡಿದರೆ, ಶಿಕ್ಷಕ ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *