ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲೆ ವತಿಯಿಂದ ವಿಧಾಸಭಾಕ್ಷೇತ್ರದ ವರೆಗಿನ ವಿವಿಧ ಸಮಿತಿಗಳ ಪದಾಧಿಕಾರಿಗಳು ಹಾಗೂ ಪಕ್ಷದ ಮಹಿಳಾ ಘಟಕವಾಗಿರುವ ವಿಮೆನ್ ಇಂಡಿಯಾ ಮೂವ್ಮೆಂಟ್ ನ ನಾಯಕರುಗಳಿಗೆ ಒಂದು ದಿನದ ನಾಯಕತ್ವ ತರಬೇತಿ ಶಿಬಿರ ”LEAD 1” ಅನ್ನು ಉಡುಪಿ ಜಿಲ್ಲೆಯ ಕಂಡ್ಲೂರಿನಲ್ಲಿ ಇಂದು ಆಯೋಜಿಸಲಾಯಿತು. ಶಿಬಿರದಲ್ಲಿ ಎಸ್ ಡಿ ಪಿ ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿ ರಿಯಾಝ್ ಕಡಂಬು, ರಾಜ್ಯ ಸಮಿತಿ ಸದಸ್ಯರಾದ ಶಾಹಿದ್ ಆಲಿ, ಎಸ್ ಡಿ ಪಿ ಐ ಮಂಗಳೂರು ನಗರ ಉಪಾಧ್ಯಕ್ಷರಾದ ಅಶ್ರಫ್ ಅಡ್ಡೂರ್ ಮತ್ತು ಫಯಾಜ್ ದೊಡ್ಡಮನೆ ರವರು ವಿವಿಧ ವಿಷಯಗಳ ಬಗ್ಗೆ ತರಬೇತಿ ನೀಡಿದರು. ಈ ಸಂಧರ್ಬದಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಹನೀಫ್ ಮೂಳೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಝಾಕ್ Y S ಮತ್ತು ಜಿಲ್ಲೆಯ ನಾಯಕರು ಉಪಸ್ಥಿತರಿದ್ದರು.

