×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಮುಡಾ ಕೇಸ್‌ನಲ್ಲಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್‌

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ವಿರುದ್ಧ ಮುಡಾ ಹಗರಣಕ್ಕೆ ಇದೀಗ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಈ ಹಗರಣದ ತನಿಖೆ ನಡೆಸಿದ ಮೈಸೂರು ಲೋಕಾಯುಕ್ತ ಅಧಿಕಾರಿಗಳು ವರದಿ ಸಿದ್ಧಪಡಿಸಿದ್ದು, ವರದಿಯಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಕ್ಲೀನ್​ಚಿಟ್ ನೀಡಿದೆ. ಹಾಗಾದ್ರೆ, ವರದಿಯಲ್ಲಿಯಲ್ಲೇನಿದೆ? ದೂರುದಾರ ಸ್ನೇಹಮಯಿಕೃಷ್ಣ ಕೊಟ್ಟ ನೋಟಿಸ್​ನಲ್ಲಿ ಏನಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ ಮೈಸೂರು, (ಫೆಬ್ರವರಿ 19): ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಮುಡಾ( ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತರು ನ್ಯಾಯಾಲಯಲಕ್ಕೆ ಸಲ್ಲಿಸಲು ಮುಂದಾಗಿದ್ದಾರೆ. ಆದ್ರೆ, ತನಿಖಾ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಕ್ಲೀನ್​ಚಿಟ್ ನೀಡಲಾಗಿದೆ. ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿ‌ಕೃಷ್ಣಗೆ ನೋಟಿಸ್ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎನ್ನುವುದನ್ನು ತಿಳಿಸಿದೆ. ಅಲ್ಲದೇ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ ಸಲ್ಲಿಸುವುದಾಗಿ ಮಾಹಿತಿ ನೀಡಿದ್ದಾರೆ.ಇನ್ನು ಪ್ರಕರಣ ತನಿಖೆ ವರದಿ ಸಂಬಂಧ ಲೋಕಾಯುಕ್ತ ಅಧಿಕಾರಿಗಳು ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್​ ಜಾರಿ ಮಾಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ  ಈ  ಪ್ರಕರಣ ತನಿಖೆಗೆ ಅರ್ಹವಲ್ಲ ಎಂದು ತಿಳಿಸಿದೆ. ತನಿಖಾಧಿಕಾರಿಗಳಿಗೆ ಸಿವಿಲ್ ಸ್ವರೂಪದ್ದೆಂದು ತನಿಖೆ ನಡೆಸಲು ತಕ್ಕುದಲ್ಲವೆಂದು ಸಂಗತಿ ಅಥವಾ ಕಾನೂನಿನ ತಪ್ಪು ತಿಳುವಳಿಕೆಯೆಂದು ಕ್ರಮ ಜರುಗಿಸತಕ್ಕುದಲ್ಲವೆಂದು ಇದರಡಿಯಲ್ಲಿ ತನಿಖೆ ನಡೆಸದೆ ವಜಾ ಮಾಡಿದ ಮೊಕದ್ದಮೆಗಳು ಬರುತ್ತವೆ. ಸಾಕ್ಷ್ಯಾಧಾರಗಳ ಕೊರತೆ ಎಂದು ಕಂಡು ಬಂದಿದೆ. ಹೀಗಾಗಿ ಈ ಪ್ರಕರಣ ತನಿಖೆಗೆ ಅರ್ಹವಲ್ಲ ಎಂದಿದೆ. ಇನ್ನು ಈ ವರದಿಯನ್ನು ವಿರೋಧಿಸುವುದಿದ್ದರೆ ತಾವು ಈ ನೋಟೀಸು ತಲುಪಿದ ಒಂದು ವಾರದೊಳಗಾಗಿ ಮ್ಯಾಜಿಸ್ಟ್ರೇಟರ್ ಎದುರು ಆ ಬಗ್ಗೆ ವಿರೋಧಿಸಬಹುದಾಗಿದೆ ಎಂದು ದೂರುದಾರ ಸ್ನೇಹಮಯಿಕೃಷ್ಣ ಅವರಿಗೆ ತಿಳಿಸಿದೆ. ಪ್ರಕರಣದ ಆರೋಪಿ-1 ರಿಂದ ಆರೋಪಿ-4 ರವರೆಗಿನ ಮೇಲಿನ ಆರೋಪಗಳು ಸಾಕ್ಷ್ಯಾಧಾರಗಳ ಕೊರತೆಯಿಂದ ಸಾಬೀತಾಗಿಲ್ಲವಾದ್ದರಿಂದ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 2016ನೇ ಸಾಲಿನಿಂದ 2024ನೇ ಸಾಲಿನವರೆಗೆ 50:50 ಅನುಪಾತದಲ್ಲಿ ಪರಿಹಾರಾತ್ಮಕ ನಿವೇಶನಗಳನ್ನು ನೀಡಿರುವ ಆರೋಪಗಳಿದ್ದು, ಈ ಬಗ್ಗೆ ಹೆಚ್ಚುವರಿ ತನಿಖೆ ನಡೆಸಿ ಕಲಂ 173 (8) ಸಿ.ಆರ್.ಪಿ.ಸಿ ರೀತ್ಯಾ ಹೆಚ್ಚುವರಿ ಅಂತಿಮ ವರದಿಯನ್ನು ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಲೋಕಾಯುಕ್ತ ಹೇಳಿದೆ.ಮುಡಾ ಕೇಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ನೀಡಿ ಬಿ ರಿಪೋರ್ಟ್‌ ಸಲ್ಲಿಸಲು ಸಿದ್ಧತೆ ನಡೆಸಿರುವ ಮೈಸೂರು ಲೋಕಾಯುಕ್ತ ಪೊಲೀಸರ ವಿರುದ್ಧ ದೂರುದಾರ ಸ್ನೇಹಮಯಿ ಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ ಸಲ್ಲಿಸುವುದಾಗಿ ಲೋಕಾಯುಕ್ತ ಪೊಲೀಸರು ಹೇಳಿದ್ದು, ಇದನ್ನ ನ್ಯಾಯಾಲಯದಲ್ಲಿ ಪ್ರಶ್ನಿಸಬಹುದೆಂದು ಹೇಳಿದ್ದಾರೆ. ತನಿಖೆ ಇನ್ನೂ ಬಾಕಿಯಿರುವಾಗಲೇ ಬಿ ರಿಪೋರ್ಟ್‌ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಇನ್ನು ತನಿಖೆ ಮುಕ್ತಾಯಗೊಳಿಸದೇ ಮಧ್ಯಂತರ ವರದಿ ಸಲ್ಲಿಸಲು ಮುಂದಾಗಿದ್ದಾರೆ. ಲೋಕಾಯುಕ್ತ ಪೊಲೀಸರಿಗೆ ನಾಚಿಕೆಯಾಗಬೇಕು ಎಂದು ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ

Leave a Reply

Your email address will not be published. Required fields are marked *