ಸಹಕಾರಿ ಧುರೀಣ ರಾಗಿ ಸಹಕಾರಿ ಕ್ಷೇತ್ರದ ಬಲ ವರ್ಧನೆಗೆ ಶ್ರಮಿಸುತ್ತಿರುವ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಅವರ 76ನೇ ಹುಟ್ಟು ಹಬ್ಬದ ಸಂಭ್ರಮದ ಅಂಗವಾಗಿ ಫೆ. 24ರಂದು ಅವರ ಅಭಿವಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಭಿವಂದನ ಸಮಿತಿ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ತಿಳಿಸಿದರು. 24ರಂದು ಬೆಳಗ್ಗೆ 10.30ಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಅಭಿವಂದನ ಕಾರ್ಯಕ್ರಮ ಜತೆಗೆ ಸವಲತ್ತುಗಳ ವಿತರಣೆ ನಡೆಯಲಿದೆ.ಸಹಕಾರ ಕ್ಷೇತ್ರವನ್ನುಸದೃಢಗೊಳಿಸುವ ಚಿಂತನೆಯೊಂದಿಗೆ ಅವಿಭಜಿತ ದ.ಕ ಜಿಲ್ಲೆಯಲ್ಲಿ ಹೊಸ ಕ್ರಾಂತಿ ಸೃಷ್ಟಿಸಿರುವ ಡಾ|ಎಂಎನ್‌ಆರ್ ಅವರು ಸಹಕಾರಿ ಗಳೆಲ್ಲರಿಗೂ ಆದರ್ಶಪ್ರಾಯರು. ಅವರ ಹುಟ್ಟುಹಬ್ಬದ ನಿಮಿತ್ತ 76 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತು ವಿತರಣೆ ನಡೆಯಲಿದೆ. ಎಂದರು.ಸಂಸದ ಕ್ಯಾ। ಬ್ರಿಜೇಶ್ ಚೌಟ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಿದ್ದರೆ ಶಾಸಕ ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು.ಈ ಸಂದರ್ಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇ ಶಕರಾದ ಭಾಸ್ಕರ ಎಸ್.ಕೋಟ್ಯಾನ್, ಜಯರಾಜ್ ರೈ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಗೊಟ್ಟು ಉಡುಪಿ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಎಸಿಡಿಸಿಸಿ ಬ್ಯಾಂಕ್ ಸಿಇಒ ಗೋಪಿನಾಥ ಭಟ್ ಉಪಸ್ಥಿತರಿದ್ದರು.

