×
Our website is made possible by displaying online advertisements to our visitors. Please consider supporting us by whitelisting our website.
  • 9880645340

‘ಮಲಬಾರ್ ವಿಶ್ವರಂಗ ಪುರಸ್ಕಾರ-2025ಕ್ಕೆ’ ರಾಜ್ಯ ಹಾಗೂ ಹೊರ ರಾಜ್ಯದ ಐವರು ಹಿರಿಯ ರಂಗಕರ್ಮಿಗಳ ಆಯ್ಕೆ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಪ್ರದಾನ ಮಾಡುತ್ತಿರುವ ಆರನೇ ವರ್ಷದ ‘ಮಲಬಾರ್ ವಿಶ್ವರಂಗ ಪುರಸ್ಕಾರ 2025ಕ್ಕೆ ‘ ರಾಜ್ಯ ಮತ್ತು ಹೊರರಾಜ್ಯದ ಐವರು ಹಿರಿಯ ರಂಗಕರ್ಮಿಗಳು ಆಯ್ಕೆಯಾಗಿದ್ದಾರೆ. ಅರವಿಂದ ಕುಲಕರ್ಣಿ ಧಾರವಾಡ (ರಂಗ ನಟ, ಸಂಘಟಕ ಹಾಗೂ ನಿರ್ದೇಶಕ) ,ಗಣೇಶ್ ಕಾರಂತ್ ಬೈಂದೂರು (ರಂಗ ಸಂಘಟಕ ಹಾಗೂ ನಿರ್ದೇಶಕ) ,ಪ್ರಿಯಾಸರೋಜಾದೇವಿ ಮುಂಬೈ (ರಂಗನಟಿ ಹಾಗೂ ಕಂಠದಾನ ಕಲಾವಿದೆ), ಪ್ರಕಾಶ್ ಜಿ. ಕೊಡವೂರು (ರಂಗನಟ ಹಾಗೂ ಸಂಘಟಕ), ಮಂಜುಳಾ ಜನಾದ೯ನ್ ಮಂಗಳೂರು (ರಂಗನಟಿ) ಇವರಿಗೆ ಮಾರ್ಚ್ 26 ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ ವಿಶ್ವರಂಗಭೂಮಿ ದಿನಾಚರಣೆಯ ಸಂದರ್ಭದಲ್ಲಿ ಪ್ರಶಸ್ತಿ ಪತ್ರ, ಫಲಕ, ನಗದು ಹಾಗೂ ಬೆಳ್ಳಿ ಪದಕದೊಂದಿಗೆ ‘ ಮಲಬಾರ್ ವಿಶ್ವರಂಗ ಪುರಸ್ಕಾರ-2025 ‘ ಪ್ರದಾನ ಮಾಡಲಾಗುವುದು ಎಂದು ಮಲಬಾರ್ ವಿಶ್ವರಂಗ ಪುರಸ್ಕಾರ ಸಮಿತಿಯ ಸಂಚಾಲಕರಾದ ರಾಜೇಶ್ ಭಟ್ ಪಣಿಯಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *